ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿ 4 ತಿಂಗಳು ಕಳೆದರೂ ಕಾಮಗಾರಿ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ತಮ್ಮಯ್ಯ ವಿರುದ್ಧ ಫ್ಲೆಕ್ಸ್ ಹಾಕಲಾಗಿದೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಚಿಕ್ಕಮಗಳೂರು ತಾಲೂಕಿನ ತೊಗರಿಹಂಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಶಾಸಕ ಎಚ್.ಡಿ ತಮಯ್ಯ ಅವರು ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು, ಆದರೆ, ಕಳೆದ 4 ತಿಂಗಳಿಂದ ಕಾಮಗಾರಿ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಊರಿನ ಪ್ರಮುಖ ಸ್ಥಳಗಳಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಗಳನ್ನು ಅಳವಡಿಸಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳಿಂದ ತೆರವು ಮಾಡಲಾಗಿದೆ.
ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ
ಆದರೆ ಶಾಸಕರು ಈ ಬಗ್ಗೆ ನಮ್ಮ ಮೇಲೆ ಕಾಂಗ್ರೇಸ್ ಕಾರ್ಯಕರ್ತರ ಮುಖಾಂತರ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಆರೋಪಿಸಿದ್ದಾರೆ.












