ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್; ಯಾಕೆ ಗೊತ್ತಾ? ಇಲ್ಲಿದೆ ನೋಡಿ

21-05-2025 ರಂದು ರೆಡ್ ಅಲರ್ಟ್ ಹಾಗೂ 22-05-2025 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಬೇಕಿದ್ದು, ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ, ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ಜೊತೆಗೆ ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಅವಕಾಶ












