ಶೃಂಗೇರಿಯಲ್ಲಿ ಕಳೆದ ಭಾನುವಾರ ಸುರಿದ ಗಾಳಿ ಸಹಿತ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಸಿದ್ದು, ಭಕ್ತಂಪುರದಲ್ಲಿ ತಾ. ಪಂ. ಸಭಾಂಗಣದ ಶೀಟ್ ವೊಂದು ಹಾರಿ ಮನೆಯ ಮೇಲೆ ಬಿದ್ದಿದೆ.

ಶೃಂಗೇರಿ ತಾಲ್ಲೂಕಿನ ಭಕ್ತಂಪುರದ ನಾಗರತ್ನ ಎನ್ನುವವರ ಮನೆ ಮೇಲೆ ಭಾನುವಾರ ಸುರಿದ ಗಾಳಿ ಸಹಿತ ಮಳೆಗೆ ತಾ. ಪಂ. ಕಟ್ಟಡದ ಶೀಟ್ ವೊಂದು 300 ಅಡಿ ಎತ್ತರದಿಂದ ಮನೆಯ ಮೇಲೆ ಬಿದ್ದಿದೆ. ಜೊತೆಗೆ ಕರೆಂಟ್ ಕಂಬ ಕೂಡ ಮನೆ ಮೇಲೆ ಬಿದ್ದು ಮನೆಗೆ ಹಾಗಿಯಾಗಿದೆ.


ಸ್ಥಳಕ್ಕೆ ಹಶೀಲ್ದಾರ್ ಸೇರಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ
ಮೂಡಿಗೆರೆ: ಭಾರಿ ಗಾಳಿ ಮಳೆ: ಹಾರಿ ಹೋದ ವಿಧ್ಯಾಭಾರತಿ ಶಾಲೆಯ ಮೇಲ್ಛಾವಣಿ
ಮೂಡಿಗೆರೆ: ಬಣಕಲ್ ಸುತ್ತಮುತ್ತ ಸೋಮವಾರ ರಾತ್ರಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಮಳೆಯಿಂದಾಗಿ ಬಣಕಲ್ ಶ್ರೀವಿದ್ಯಾಭಾರತಿ ಶಾಲೆಯ ಕಬ್ಬಿಣದ ಮೇಲ್ಛಾವಣಿ ಹಾರಿ ಹೋಗಿದೆ. ಗಾಳಿ ಮಳೆಯ ತೀವ್ರತೆಯಿಂದಾಗಿ ಮೇಲ್ಛಾವಣಿಯ ಕಬ್ಬಿಣದ ಕಂಬಿಗಳು ಬಾಗಿದ್ದು ಗೋಡೆಗಳು ಬಿರುಕು ಬಿಟ್ಟಿದ್ದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಶಾಲಾ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಶಾಲಾ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ, ಸಂಸದರ ಅನುದಾನದಲ್ಲಿ ನಿರ್ಮಿಸಲಾಗಿದ್ದ ಮೇಲ್ಛಾವಣಿ ಗಾಳಿ ಮಳೆಯಿಂದ ಹಾರಿ ಹೋಗಿ ಸುಮಾರು 4 ಲಕ್ಷ ನಷ್ಟ ಸಂಭವಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರಿಗೂ ದುರಸ್ತಿ ಮಾಡಿ ಕೊಡುವಂತೇ ಮನವಿ ಮಾಡಲಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
ಶಾಲೆಗೆ ರಜೆ ಇದ್ದುದ್ದರಿಂದ ಮತ್ತು ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದ್ದುರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಬಣಕಲ್ ನ ಶ್ರೀವಿದ್ಯಾಭಾರತಿ ಶಾಲೆಯೂ ಹಲವು ವರ್ಷಗಳಿಂದ ಶೇ 100 ಫಲಿತಾಂಶವನ್ನು ಪಡೆದುಕೊಂಡು ಬರುತ್ತಿದೆ. ಶಾಲೆಗೆ ಬರುವ ರಸ್ತೆಯೂ ಸಂಪೂರ್ಣ ಹಾಳಾಗಿದೆ. ಇದೀಗ ಶಾಲಾ ಕಟ್ಟಡದ ಮೇಲ್ಚಾವಣಿಯೂ ಹಾನಿಯಾಗಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೆರವಿಗೆ ಬರಬೇಕಿದೆ ಎಂದರು.

ಈ ಸಂದರ್ಭದಲ್ಲಿ ಶಾಲಾ ಸಮಿತಿಯ ಲಿಂಗಪ್ಪ ಹಾಗೂ ಶಿಕ್ಷಕರು ಇದ್ದರು. (ವರದಿ- ತನು ಕೊಟ್ಟಿಗೆಹಾರ)












