ಜಯಪುರ: ಶ್ರೀ ಸದ್ಗುರು ವಿದ್ಯಾ ಸಂಸ್ಥೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಯೂಟ್ಯೂಬರ್ ಅರೆಸ್ಟ್

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಬಸರೀಕಟ್ಟೆಯ ಶ್ರೀ ಸದ್ಗುರು ವಿದ್ಯಾ ಸಂಸ್ಥೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಯೂಟ್ಯೂಬರ್ ನನ್ನು ಗ್ರಾಮಸ್ಥರೇ ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ಭಾನುವಾರ ನಡೆದಿದೆ.

 

ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ

ಶನಿವಾರ ಶ್ರೀ ಸದ್ಗುರು ವಿದ್ಯಾಸಂಸ್ಥೆಯ ಪ್ರೌಢಶಾಲೆ ಮತ್ತು ಶ್ರೀ ಸದ್ಗುರು ವಿದ್ಯಾ ಮಂದಿರದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮದ ವೀಡಿಯೋ ರೆಕಾರ್ಡ್ ಮಾಡಲು ಬಂದಿದ್ದ ಬೆಳ್ತಂಗಡಿ ಮೂಲದ ಯೂಟ್ಯೂಬರ್ ಶರತ್ ಕಾರ್ಯಕ್ರಮದ ವಿಡಿಯೋ ರೆಕಾರ್ಡ್ ಮಾಡಿ, ಶಾಲೆಯಲ್ಲಿ ಉಳಿದುಕೊಂಡಿದ್ದ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ

ಶನಿವಾರ ಮದ್ಯ ರಾತ್ರಿ ಶಾಲೆಯ ರೂಮಿನ ಬೀಗ ಮುರಿದು ಒಳ ಪ್ರವೇಶಿಸಿ, ಬೀರುವಿನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾನೆ. ಆಗ ಉಂಟಾದ ಶಬ್ಧ ಆಲಿಸಿದ ಹತ್ತಿರದ ಮನೆಯಲ್ಲಿ ವಾಸವಿದ್ದ ಸಿಬ್ಬಂದಿ ರಾಕೇಶ್ ಹಾಗೂ ಅವರ ಪತ್ನಿ ಭವ್ಯ ಆರೋಪಿಯನ್ನು ಹಿಡಿದು, ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ.

 

ಘಟನೆ ಮಾಹಿತಿ ಪಡೆದ ಜಯಪುರ ಪಿಎಸೈ ಅಂಬರೀಶ್ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

 

ಶೃಂಗೇರಿ ಜಗದ್ಗುರುಗಳು ರಾಮಮಂದಿರದ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಸಂದೇಶ ವೈರಲ್

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಅಯೋಧ್ಯೆ ನಗರ ಸಿಂಗಾರಗೊಳ್ಳುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಜಗದ್ಗುರುಗಳು ರಾಮಮಂದಿರದ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ

ಶ್ರೀಮಠದ ಸ್ಪಷ್ಟನೆ ಏನು?:
ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ “www.dainikjagran.com” ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ.

ಆದರೆ ಜಗದ್ಗುರು ಶ್ರೀಶ್ರೀಭಾರತೀತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ “www.sringeri.net” ಎಂಬ ವೆಬ್ ಸೈಟ್ ನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಶ್ರೀಮಠದಿಂದ ಸ್ಪಷ್ಟನೆ ನೀಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.