ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿಲ್ಲ: ಟ್ರಸ್ಟ್ ಮುಖ್ಯಸ್ಥರ ಸ್ಪಷ್ಟನೆ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರದಲ್ಲಿ ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರುವ ಯೋಜನೆಯಲ್ಲಿ ಇತರೆ ಜಾತಿಯವರಿಗೆ ತರಬೇತಿ ನೀಡಿ, ಅದರಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಕೇಳಿಬಂದ ಆರೋಪದ ಹಿನ್ನೆಲೆಯಲ್ಲಿ ಈ ಕುರಿತು ನ್ಯೂಸ್ ಮಲ್ನಾಡ್ ಗೆ ಪತ್ರಿಕಾ ಹೇಳಿಕೆ ನೀಡಿರುವ ಶ್ರೀ ಅನ್ನಪೂರ್ಣೇಶ್ವರಿ ಚಾರಿಟೇಬಲ್ ಟ್ರಸ್ಟ್, ಜಯಪುರ ವಿಭಾಗದ ಮುಖ್ಯಸ್ಥರಾದ ಸಂಧ್ಯಾ, ನಾವು ಇದರಲ್ಲಿ ಯಾವುದೇ ಅವ್ಯವಹಾರ ಮಾಡಿಲ್ಲ, ಸುಮಾರು 6 ವರ್ಷಗಳಿಂದ ನ್ಯಾಯಯುತವಾಗಿ ತರಬೇತಿ ನಡೆಸಿಕೊಂಡು ಬಂದಿದ್ದೇವೆ, ಕೆಲವು ದಿನಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ನೀಡುವಾಗ ಇತರೆ ವರ್ಗದವರು ಸಹ ಬಂದು ತರಬೇತಿ ಪಡೆದುಕೊಂಡಿದ್ದರು, ಆದರೆ ಅವರ ಯಾವುದೇ ದಾಖಲೆಗಳನ್ನು ಪಡೆದು ಅವರ ಹೆಸರಿನಲ್ಲಿ ಯಾವುದೇ ಅನುದಾನ ಪಡೆದಿಲ್ಲ.


ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಅಲ್ಲಿ ಬಂದಿದ್ದವರಿಗೆ ಮಾಹಿತಿ ಕೊರತೆಯಿಂದ ಹಾಗೆ ಆರೋಪ ಮಾಡಿದ್ದು ಆ ಸಂದರ್ಭದಲ್ಲಿ ಅವರೊಂದಿಗೆ ಈ ಕುರಿತು ಸರಿಯಾಗಿ ಸಂಹವನ ಮಾಡಲಾಗಿರಲಿಲ್ಲ ಆದಕಾರಣ ಗೊಂದಲ ಉಂಟಾಗಿದೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸಿದಲ್ಲಿ ಉತ್ತರಿಸುತ್ತೇವೆ ಎಂದು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 1,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಕಡೂರು: ಮಹಾಮಾರಿ ಡೆಂಗ್ಯೂಗೆ ಆರು ವರ್ಷದ ಬಾಲಕಿ ಬಲಿ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಸಾನಿಯಾ (6) ಮೃತ ಬಾಲಕಿ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಸಾನಿಯಾ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಬೇಸರ:
ಮಗಳ ಮೃತ ದೇಹದ ಮುಂದೆ ನಿಂತು ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ. ಇಲ್ಲವಾದರೆ ಸರ್ಕಾರಕ್ಕೆ ಜನ ಛೀಮಾರಿ ಹಾಕುತ್ತಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಮೃತ ಬಾಲಕಿಯ ತಂದೆ ಆಸಿಫ್ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.