ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆ ಗ್ರಾಮ ಪಂಚಾಯಿತಿ ಬಾಳಗೆರೆ ಗ್ರಾಮದ ಹೊಲ್ನ ಮಾದೇಶ ಅವರ ಮನೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಇದನ್ನೂ ಓದಿ: ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ.. ಏನಿದೆ ಇದರಲ್ಲಿ..?; ಅಲ್ಪಸಂಖ್ಯಾತರ ಕಲ್ಯಾಣ: ಹೆಚ್ಚಿನ ಘೋಷಣೆಗಳು – ಇಲ್ಲಿ ಹೈಲೈಟ್ಸ್

ಕೊಟ್ಟಿಗೆಯಲ್ಲಿ 6 ಹಸುಗಳಿದ್ದು, ಒಂದು ಹಸುವಿನ ಮೇಲೆ ದಾಳಿ ನಡೆಸಿದೆ. ಹಸು ತೀವ್ರ ರಕ್ತಸ್ರಾವದಿಂದ ಸಾವು-ಬದುಕಿನ ಹೋರಾಟ ನಡೆಸಿದೆ. ಇನ್ನು 15 ದಿನಗಳ ಹಿಂದಷ್ಟೇ ಕರ್ಚಾರ್ ರತ್ನಮ್ಮ ಎಂಬುವರ ಮನೆಯಲ್ಲಿ ಇಂಥದ್ದೇ ಘಟನೆ ನಡೆದಿತ್ತು.
ಇದನ್ನೂ ಓದಿ: ಕರ್ನಾಟಕ ಬಜೆಟ್ 2025-26: SC/ST ಸಮುದಾಯಗಳಿಗೆ ಸಿದ್ದರಾಮಯ್ಯ ಗಿಫ್ಟ್
ಈ ಘಟನೆಯಿಂದ ಸ್ಥಳೀಯರು ಭಯಗೊಂಡಿದ್ದಾರೆ.
ಇದನ್ನೂ ಓದಿ: ಸೌರ ಪಂಪ್ ಯೋಜನೆಗೆ 1 ಲಕ್ಷ ಸಹಾಯಧನ; ಸಂಪೂರ್ಣ ಮಾಹಿತಿ ಇಲ್ಲಿದೆ












