ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರ: ಕೋಟ ಶ್ರೀನಿವಾಸ ಪೂಜಾರಿಯಿಂದ ಅಚ್ಚರಿಯ ಪ್ರತಿಕ್ರಿಯೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲಿ ಹಾವೇರಿಯಿಂದ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.

 

ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ರೆ 3 ತಿಂಗಳ ಕಾಲ ಈ ಸೇವೆ ಉಚಿತ; ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್

ಈ ವಿಚಾರವಾಗಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆಸಿದ್ದು, ಇನ್ನೂ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ ಎಂದರು.

ಇದನ್ನೂ ಓದಿ; ಹೊಸ ಮನೆ ಕಟ್ಟೋರಿಗೆ ಸಿಹಿ ಸುದ್ದಿ!; ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ ಹೋಂ ಲೋನ್

28 ಲೋಕಸಭೆ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆಯಾಗುವಾಗ ಅಪೇಕ್ಷೆಗಳು, ಬೇಡಿಕೆ ಇರುತ್ತವೆ. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡುವುದು ಪಕ್ಷದ ಜವಾಬ್ದಾರಿ. ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಹಿರಿಯ ನಾಯಕ. ರಾಷ್ಟ್ರ ಮತ್ತು ರಾಜ್ಯ ನಾಯಕರು ಅವರನ್ನು ಕರೆದು ಒಂದೆರಡು ದಿನಗಳಲ್ಲೇ ಸಮಾಧಾನ ಮಾಡಿ ಗೊಂದಲ ಪರಿಹರಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಇದನ್ನೂ ಓದಿ; ತಿಂಗಳಿಗೆ ಕೇವಲ 500 ರೂಪಾಯಿ ಉಳಿತಾಯ ಮಾಡಿದ್ರೆ ಸಿಗುತ್ತೆ 2 ಲಕ್ಷ ರೂಪಾಯಿ!; ಯಾವ ಯೋಜನೆ? ಅರ್ಹತೆ ಏನಿರಬೇಕು? ಇಲ್ಲಿದೆ ಡಿಟೈಲ್ಸ್

ಶೃಂಗೇರಿ: KSRTC ಬಸ್ ಡಿಪೊಗಾಗಿ ಮಂಜೂರಾದ ಕಂದಾಯ ಭೂಮಿ ಹಸ್ತಾಂತರ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾವಣದ ಸರ್ವೇ ನಂಬರ್ 196ರಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೊಗಾಗಿ ಮಂಜೂರಾದ 4 ಎಕರೆ 23 ಗುಂಟೆ ಕಂದಾಯ ಭೂಮಿಯನ್ನು ಕಂದಾಯ ಇಲಾಖೆಯು ಕೆ.ಎಸ್.ಆರ್.ಟಿ.ಸಿಗೆ ಹಸ್ತಾಂತರ ಮಾಡಿದರು.

ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ಬಸ್ ಡಿಪೊಗಾಗಿ ಈ ಹಿಂದೆ ಬಾಳೆಹೊನ್ನೂರಿನ ಶಂಕರನಾರಾಯಣ ಭಟ್ ಬಳಕೆದಾರರ ವೇದಿಕೆ ಮೂಲಕ ಹೋರಾಟ ನಡೆಸಿದರು. ಮೆಣಸೆ ಗ್ರಾಮ ಪಂಚಾಯಿತಿಯ ಶಿಡ್ಲೆಯಲ್ಲಿ 5 ಎಕರೆ ಜಾಗ ಮಂಜೂರಾಗಿತ್ತು. ಆದರೆ, ಅರಣ್ಯ ಇಲಾಖೆಗೆ ಸೇರಿದ್ದರಿಂದ ಸಮಸ್ಯೆಯಾಗಿತ್ತು. ಇದೀಗ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾವಣದಲ್ಲಿ 4 ಎಕರೆ 23 ಗುಂಟೆ ಕಂದಾಯ ಭೂಮಿಯನ್ನು ಕೆ.ಎಸ್.ಆರ್.ಟಿ.ಸಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!

ವರ್ಷದೊಳಗೆ ಬಸ್ ಸೇವೆ ಲಭ್ಯ:
4 ಎಕರೆ 23 ಗುಂಟೆ ಕಂದಾಯ ಭೂಮಿಯನ್ನು ಮಂಜೂರು ಮಾಡಿರುವ ಸರ್ಕಾರ ಕೆ.ಎಸ್.ಆರ್.ಟಿ.ಸಿಗೆ ಹಸ್ತಾಂತರಿಸಿದ್ದು, 8 ಕೋಟಿ ವೆಚ್ಚದ ಅಂದಾಜು ಪಟ್ಟಿ ಅನುಮೋದನೆ ಆಗಿ ಟೆಂಡರ್ ಪ್ರಕ್ರಿಯೆ, ಕರಾರು ಒಪ್ಪಂದ ಮುಗಿದಿದೆ. ಇನ್ನು ಒಂದು ವರ್ಷದಲ್ಲಿ ಡಿಪೊ ನಿರ್ಮಾಣವಾಗಿ ಬಸ್ ಸೇವೆ ಆರಂಭವಾಗಲಿದೆ ಎಂದು ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ತಿಳಿಸಿದರು.

ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.