ರಾಷ್ಟ್ರಮಟ್ಟದ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚು ಗೆದ್ದ ಮಾನ್ಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಎನ್.ಸಿ.ಸಿ ಶಿಬಿರ-ಆಲ್ ಇಂಡಿಯಾ ವಾಯು ಸೈನಿಕ್ ಕ್ಯಾಂಪ್ ನಲ್ಲಿ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಕುಮಾರಿ ಮಾನ್ಯ ಕೆಂಚೈನ್ ಡಿ.ಜೆ. ಕಂಚಿನ ಪದಕ ಗಳಸಿದ್ದಾರೆ.

 

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ನ್ನು ಪ್ರತಿನಿಧಿಸಿದ್ದ ಮಾನ್ಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದವರು. ಇವರು ನ್ಯಾಯಾಧೀಶರಾದ ಜಯಪ್ರಕಾಶ್ ದೇವವೃಂದ ಹಾಗೂ ವಿನುತ ಜಯಪ್ರಕಾಶ್ ರವರ ಪುತ್ರಿಯಾಗಿದ್ದು, ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

 

ಮಲೆನಾಡಿನಲ್ಲಿ ಭೀಕರ ದುರಂತ: ಒಂದೇ ಕುಟುಂಬದ ಮೂವರು ಸಜೀವ ದಹನ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಮನೆಯಲ್ಲಿ ಬೆಂಕಿಗೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ಘಟನೆ ನಡೆದಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಾವನ್ನಪ್ಪಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಇದನ್ನೂ ಓದಿ; ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 07-10-2023

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟತೆ ನೀಡಬೇಕಿದೆ.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-07.10.2023

ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೆಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಇಡೀ ಗ್ರಾಮವನ್ನೇ ಕಂಗೆಡಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಶೃಂಗೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸಮೀಪ ನಡೆದಿದೆ.

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ

ನಿನ್ನೆ (ಶುಕ್ರವಾರ)ಸಂಜೆ ಸುಮಾರು 6.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಬೈಕ್ ನ ಮುಂಭಾಗ ನಜ್ಜುಗುಜ್ಜಾಗಿದೆ. ಇನ್ನು ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ; ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.