ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಒಗಳನ್ನು ಬಂಧಿಸಿರಯುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37) ಬಂಧಿತ ಆರೋಪಿಗಳು.
ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಕುರಿತು ಮಹತ್ವದ ಕ್ರಮ; ಸರ್ಕಾರದಿಂದ ನಾಲ್ಕು ಹಂತದ ಸಮಿತಿ ರಚನೆ!

ಬಿ.ಕಣಬೂರು ಗ್ರಾಮದ ವಾಟುಕುಡಿಗೆ ಬಸ್ ನಿಲ್ದಾಣದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣಾ ಪಿ.ಎಸ್.ಐ ರವೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಾದ ಸಂತೋಷ್ ಆಂದ್ರ ಪ್ರದೇಶದ ವೈಜಾಕ್ ನಿಂದ ಗಾಂಜಾ ತಂದು ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಇನ್ನು ಬಂಧಿತ ಆರೋಪಿಗಳಿಂದ ಸುಮಾರು 15,000/- ರೂ ಬೆಲೆ ಬಾಳುವ 680.00 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: 12,000 ದಿಂದ 18,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












