Mudigere; (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಿನ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆಯ ಗೂಡಾಗಿದೆ. ಹೌದು, ಮೂಡಿಗೆರೆ (Mudigere;) ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳಾದ ಕಾರು ಬೈಕು ಗಳದ್ದೇ ದರ್ಬಾರ್ ಆಗಿದೆ.
ಇದನ್ನೂ ಓದಿ; ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 09-09-2023

ಖಾಸಗಿ ವಾಹನಗಳದ್ದೇ ದರ್ಬಾರ್:
ಬಸ್ ನಿಲ್ದಾಣದ ಒಳಗೆ ಎಲ್ಲೆಂದರಲ್ಲಿ ತಮ್ಮ ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದು, ಅಲ್ಲದೆ ಬೈಕ್ ಸವಾರರು ಅಡ್ಡ ದಿಡ್ಡಿ ಓಡಿಸುತ್ತಿದ್ದಾರೆ. ಸಾರಿಗೆ ಬಸ್ಸುಗಳು ಚಲಿಸುವ ಮಾರ್ಗ ಮಧ್ಯೆಯೇ ಖಾಸಗಿ ವಾಹನಗಳನ್ನು ನಿಲ್ಲಿಸಿ ಎಲ್ಲೆಂದರಲ್ಲಿ ಹೋಗುತ್ತಾರೆ. ಕೆ.ಎಸ್.ಆರ್.ಟಿ.ಸಿ ಚಾಲಕರು ತುಂಬಾ ತಾಳ್ಮೆಯಿಂದ ಇದನ್ನು ಸಹಿಸಿಕೊಂಡು ಮೂಡಿಗೆರೆ ಬಸ್ ನಿಲ್ದಾಣದ ಅಧಿಕಾರಿಗಳ ವಿರುದ್ಧ ಅಸಹನೆಯನ್ನು ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.09.2023
ಬೈಕ್ ಸವಾರರ ವೇಗಕ್ಕೂ ಮಿತಿ ಇಲ್ಲ:
ಇದಲ್ಲದೆ ಪ್ರಯಾಣಿಕರು ಮೂಡಿಗೆರೆ (Mudigere;) ಮತ್ತು ಸಕಲೇಶಪುರಕ್ಕೆ ಬಸ್ ಬಂದು ನಿಂತ ತಕ್ಷಣ ಪ್ರಯಾಣಿಕರು ಆತುರದಿಂದ ಓಡಿ ಹೋಗಿ ಸೀಟನ್ನು ಕಾಯ್ದಿರಿಸುತ್ತಾರೆ. ಈ ಆತುರದಲ್ಲಿ ಓಡಿ ಹೋಗುವಾಗ ಎದುರಿನಿಂದ ಬೈಕ್ ಸವಾರರು ನಿಲ್ದಾಣದ ಒಳಗೆ ತಮ್ಮ ವೇಗಕ್ಕೂ ಮಿತಿ ಇಲ್ಲದಂತೆ ಅಡ್ಡ ಬಂದು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಾರೆ. ಆಕಸ್ಮಿಕವಾಗಿ ಪ್ರಯಾಣಿಕರು ಬೈಕ್ ಸವಾರರಿಗೆ ಪ್ರಶ್ನೆ ಮಾಡಲು ಮುಂದಾದರೆ ಕ್ಷಣಾರ್ಧದಲ್ಲಿ 10 ರಿಂದ 15 ಜನರ ಗುಂಪು ಸೇರಿ ಪ್ರಯಾಣಿಕರ ಮೇಲೆ ಎರಗುತ್ತಾರೆ.

ನೋಡಿಯೂ ನೋಡದ ಹಾಗೆ ವರ್ತಿಸುವ ಇಲ್ಲಿನ ಅಧಿಕಾರಿಗಳು:
ಇದೆಲ್ಲವೂ ದಿನನಿತ್ಯ ನೋಡಿಯೂ ಕೂಡ ನೋಡದೆ ಹಾಗೆ ವರ್ತಿಸುತ್ತಿರುವವರು ಮೂಡಿಗೆರೆಯ ಬಸ್ ನಿಲ್ದಾಣದ ಅಧಿಕಾರಿಗಳು ಇವರ ಬೇಜವಾಬ್ದಾರಿತನಕ್ಕೆ ವಿವಿಧ ಕಡೆಯಿಂದ ಬಂದಂತಹ ಪ್ರಯಾಣಿಕರು ಹಿಡಿ ಶಾಪ ಹಾಕುತ್ತಿದ್ದಾರೆ. ಇನ್ನು ಕೆಲವರ್ಷಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇನ್ ಗೇಟ್ ಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಗಳನ್ನು ನೇಮಿಸಿ ಬಸ್ ನಿಲ್ದಾಣದ ಒಳಗಡೆ ನಿರ್ಬಂಧವನ್ನು ವಿಧಿಸಲಾಗಿತ್ತು. ಅದೆಲ್ಲವನ್ನು ಈಗ ಗಾಳಿಗೆ ತೂರಲಾಗಿದೆ.
ಇನ್ನು ಪ್ರಯಾಣಿಕರಿಗೆ ಏನಾದರೂ ಅವಘಡ ಸಂಭವಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಖಾಸಗಿ ವಾಹನಗಳನ್ನು ನಿರ್ಬಂಧಿಸಿ ಬಸ್ಸುಗಳಿಗೆ ಸೂಕ್ತ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

ದೂರದ ಊರಿನಲ್ಲಿ ಕೆಲಸ ಮಾಡುವವರು ಮತ್ತು ದೂರದ ಜಿಲ್ಲೆಗಳಿಗೆ ಆಸ್ಪತ್ರೆಗಳಿಗೆ ತೆರಳಲು ಸಾರ್ವಜನಿಕರು ಮುಂಜಾನೆಯೇ ತಮ್ಮ ವಾಹನಗಳನ್ನು ಮೂಡಿಗೆರೆಯ ಪಟ್ಟಣದಲ್ಲಿ ಎಲ್ಲೆಂದರಲ್ಲಿ ನಿಲ್ಲಿಸಿ ಹೋಗುತ್ತಾರೆ. ಅವರು ತಮ್ಮ ಕೆಲಸಗಳನ್ನು ಮುಗಿಸಿ ಬರುವಾಗ ತಮ್ಮ ವಾಹನಗಳಿಗೆ ಯಾವುದೇ ರೀತಿಯ ಭದ್ರತೆಯು ಕೂಡ ಇರುವುದಿಲ್ಲ. ಅಲ್ಲದೇ KSRTC ಬಸ್ ಗಳಿಗೂ ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಆದುದರಿಂದ ಈ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒಂದೇ ಅದು ಸೂಕ್ತ ಪಾರ್ಕಿಂಗ್ ವ್ಯವಸ್ಥೆ. ಈ ಕುರಿತು ಶಾಸಕರು, ಅಧಿಕಾರಿಗಳು ಗಮನ ಹರಿಸಬೇಕು. – ಸಿ. ಏಲ್. ಪೂರ್ಣೇಶ್, ಚಕ್ಕುಡಿಗೆ
ಗಮನಹರಿಸಬೇಕಿದೆ ಸ್ಥಳೀಯ ಶಾಸಕರು:
ಖಾಸಗಿ ವಾಹನಗಳಿಗೆ ಸೂಕ್ತ ರೀತಿಯ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಮುಂದಿನ ದಿನಗಳಲ್ಲಿ ಮೂಡಿಗೆರೆ ಪಟ್ಟಣದಲ್ಲಿ ಖಾಸಗಿ ವಾಹನಗಳಿಗೆ ಸೂಕ್ತವಾದ ಪಾರ್ಕಿಂಗ್ ಸ್ಥಳವನ್ನು ಗುರುತಿಸಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ನಲ್ಲಿ ಬುಧವಾರ ಸಂಜೆ ನಡೆದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್ | ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.
ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.












