ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಸ್ಥಳೀಯ ಮುಖಂಡರುಗಳ ಕಡೆಗಣನೆ ವಿರೋಧಿಸಿ ಶಾಸಕರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಅರಣ್ಯ ಅಧಿಕಾರಿಗಳ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಶಾಸಕ ಟಿ.ಡಿ. ರಾಜೇಗೌಡ ಬಂದ ವೇಳೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಧಿಕಾರಿಗಳ ಮೇಲೆ ನಿಮಗೆ ಹಿಡಿತವಿಲ್ಲ. ನಿಮ್ಮಿಂದಲೇ ವ್ಯವಸ್ಥೆ ಹಾಳಾಗುತ್ತಿದೆ. ಸಚಿವರು ಬರುತ್ತಿರುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೂ ಕರೆಯುವ ಸೌಜನ್ಯ ಅಧಿಕಾರಿಗಳಿಗೆ ಇಲ್ಲವೇ. ನಾವು ಬೇಕು ಅಂದ್ರೆ ಹೋಗ್ಬೇಡಿ, ಬೇಡ ಅಂದ್ರೆ ನೀವು ಕೂಡ ಕಾರ್ಯಕ್ರಮಕ್ಕೆ ಹೋಗಿ” ಎಂದು ಆಕ್ರೋಶ ಹೊರಹಾಕಿದರು.
ಈ ಘಟನೆಯಿಂದಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಶಾಸಕ ರಾಜೇಗೌಡ ಪರಿಸ್ಥಿತಿ ನಿಯಂತ್ರಿಸಿ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಲಾಗುವುದು. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಬಳಿಕ ₹45 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಆರ್‌ಎಫ್‌ಒ ಕಚೇರಿಯನ್ನು ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!












