ಮೂಡಿಗೆರೆ: ಕರ್ತವ್ಯದಲ್ಲಿದ್ದ KSRTC ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕರ್ತವ್ಯದಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕೊಪ್ಪಳ ದ ಕೂಕ್ನೂರ್ ಗ್ರಾಮದ  ರವಿ ಲಮಾಣಿ (46) ಸಾವನ್ನಪ್ಪಿರುವ ಬಸ್ಸಿನ ಚಾಲಕ.

 

ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಮೂಡಿಗೆರೆಯಿಂದ ಮಾರ್ಗಗುತ್ತಿ ಹಳ್ಳಿ, ಹೆಸ್ಗೋಡ್ ಗ್ರಾಮಕ್ಕೆ ಹೊರಟ ಸರಕಾರಿ ಬಸ್ಸು, ಚಾಲಕನಿಗೆ ಬಸ್ಸಿನಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಹೆಸ್ಗೋಡ್ ಬಳಿ ಬಸ್ಸ್ ನಿಲ್ಲಿಸಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ

ಮೂಡಿಗೆರೆ ತಾಲ್ಲೂಕಿನ ಹೆಸ್ಗೋಡ್ ಗ್ರಾಮದಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)

 

ಚಿಕ್ಕಮಗಳೂರು: ಸಿಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಮಧ್ಯರಾತ್ರಿ ಮುಸುಕುಧಾರಿಗಳು ಮನೆಗೆ ನುಗ್ಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

 

ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಆಪ್ತನ ಆರೋಗ್ಯ ವಿಚಾರಿಸಿದ ಸಿಟಿ ರವಿ:
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸಿಟಿ ರವಿ ಅವರು ಜಿಲ್ಲಾಸ್ಪತ್ರೆಗೆ ಆಗಮಿಸಿ ದುರ್ಗೇಶ್ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ. ರಾಡ್ ನಿಂದ ಹಲ್ಲೆ ಮಾಡಿರುವ ಉದ್ದೇಶ ಕೊಲೆ ಮಾಡುವುದು. ಮಂಕಿ ಕ್ಯಾಪ್ ಗ್ಲೌಸ್ ಹಾಕಿಕೊಂಡು ಬಂದಿದ್ದಾರೆ ಎಂದು ಆರೋಪಿಸಿದರು.

ತನಿಖೆಗೆ ಒತ್ತಾಯ:
ದುರ್ಗೆಶ್ ಬಗರ್ ಕುಂ ಸಾಗುವಳಿ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ್ದಾರೆ. ಗೋಮಾಳ ಜಮೀನಿನಲ್ಲಿ ಕ್ರಷರ್ ಗೆ ಅನುಮತಿ ನೀಡಿದ್ದಾರೆ. ಆದರೆ ರೈತರಿಗೆ ರಾಗಿ ಬೆಳೆಯಲು ಬಿಡುವುದಿಲ್ಲ. ಇದರ ವಿರುದ್ಧ ದುರ್ಗೇಶ್ ಹೋರಾಟ ಮಾಡಿದ್ದಾರೆ. ದುರುದ್ದೇಶ ಪೂರ್ವಕವಾಗಿ ಹತ್ಯೆ ಮಾಡಲು ಹಲ್ಲೆ ಮಾಡಲಾಗಿದೆ. ಪೊಲೀಸ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.