ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಗೆ ತರಕಾರಿ ತುಂಬಿದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತ ವ್ಯಕ್ತಿ.
ಇದನ್ನೂ ಓದಿ; ಪೊಲೀಸ್ ಹಾಗೂ ನಕ್ಸಲರ ನಡುವೆ ಮತ್ತೆ ಫೈರಿಂಗ್, ಮೂರು ರೈಫಲ್ ವಶ

ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ತಂದೆ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಚಾಲಕನ ಅವಸರದಿಂದಾ ಅಪಘಾತದ ರಭಸಕ್ಕೆ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಲಾರಿಯೂ ಪಲ್ಟಿಯಾಗಿದೆ.
ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಚಿಕ್ಕಮಗಳೂರು: ಮನೆಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮನೆಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಗರದ ಕಲ್ಯಾಣ ನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣದಲ್ಲಿ ಪಿ.ಐ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪೊಲೀಸ್ ತಂಡದ ನೇತೃತ್ವದಲ್ಲಿ, ಕಳ್ಳತನವಾದ 48 ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಕಳುವಾಗಿದ್ದ 2.5 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ 15 ಲಕ್ಷ ಬೆಲೆಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಚಾರಣೆಯಲ್ಲಿ ಪಿ.ಐ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ರೇಣುಕಾ ಪ್ರಸಾದ್ ಎಸ್, ಪಿ.ಎಸ್.ಐ ಕೆ. ಎಸ್. ಸತೀಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ನಂಜಪ್ಪ, ನವೀನ್, ಪ್ರದೀಪ್ ಮತ್ತು ದಿನೇಶ್ ರವರು ಇದ್ದರು.












