ಗಮನಿಸಿ: ನಾಳೆ ಶೃಂಗೇರಿಯ ಈ ಭಾಗದಲ್ಲಿ ಕರೆಂಟ್ ಇರಲ್ಲ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ಒಂದು ದಿನ ವಿದ್ಯುತ್ ನಿಲುಗಡೆಯಾಗಲಿದೆ.

 

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 60,000 ರವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ

14.09.2023 ಗುರುವಾರದಂದು (ನಾಳೆ) ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಉನ್ನತೀಕರಣ ಹಾಗೂ ಟವರ್ ನಿರ್ಮಾಣ ಕಾಮಗಾರಿ ಹಾಗೂ ಎಫ್-೩ ಕುಂಚೇಬೈಲು ಪ್ರೇಷಕದ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ.

 

ಇದನ್ನೂ ಓದಿ; ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಗುಡ್ ನ್ಯೂಸ್; 1200 ವಿಶೇಷ ಬಸ್‌ಗಳ ವ್ಯವಸ್ಥೆ; ಮಾರ್ಗ ಕುರಿತು ಮಾಹಿತಿ ಇಲ್ಲಿದೆ

ಆದ್ದರಿಂದ ಶೃಂಗೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆಯಾಗುವುದರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಚಿಕ್ಕಮಗಳೂರು; ಬಸ್‌- ಕಾರು ಮುಖಾಮುಖಿ ಡಿಕ್ಕಿ | 9 ಮಂದಿಗೆ ಗಂಭೀರ ಗಾಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂಬತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಸಂಭವಿಸಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಶಿವಮೊಗ್ಗ ಕಡೆಯಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿತ್ತು. ಕಾರಿನಲ್ಲಿದ್ದವರು ತರೀಕೆರೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದರು. ಬಸ್ ಮತ್ತು ಕಾರು ನಡುವೆ ಬೇಲನಹಳ್ಳಿ ಗ್ರಾಮದ ಸಮೀಪ ಡಿಕ್ಕಿ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನು ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದ್ದು, ಅಪಘಾತ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಳೆಹೊನ್ನೂರು: ಭಿಕ್ಷೆ ಬೇಡಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಬಸ್ ನಿಲ್ದಾಣಕ್ಕಾಗಿ ಭಿಕ್ಷೆ ಬೇಡಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬಗೆರೆ ಗ್ರಾಮದಲ್ಲಿ ನಡೆದಿದೆ

ಇಲ್ಲಿಯ ಜನರು ಬಸ್ ನಿಲ್ದಾಣವಿಲ್ಲದೆ ಪರದಾಟ ನಡೆಸುತ್ತಿದ್ದರು. ಜನಪ್ರತಿನಿಧಿಗಳಿಗೆ ನೂರಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರಿಗೂ ಮನವಿ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಇದರಿಂದ ರೋಸಿಹೋದ ಸಾರ್ವಜನಿಕರು ಭಿಕ್ಷಾಟನೆ ಮಾಡಿ ಅದರಿಂದ ಬಂದ ಹಣದಿಂದ ಟಾರ್ಪಲ್ ಖರೀದಿಸಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.