ಶಿವಮೊಗ್ಗ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮದುವೆಯಾಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮೃತ ದೇಹವನ್ನು ಹೂತು ಹಾಕಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಣವಂತೆಯ ನರ್ಸಿಂಗ್ ವಿದ್ಯಾರ್ಥಿನಿ ಸೌಮ್ಯಾ(27) ಕೊಲೆಯಾದ ಯುವತಿ.

ಸಾಗರ ತಾಲೂಕು ತಾಳಗುಪ್ಪದ ಸೃಜನ್ ಕೊಲೆ ಆರೋಪಿ.

ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ತೀರ್ಥಹಳ್ಳಿಯ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್, ಕೊಪ್ಪ ಮೂಲದ ಸೌಮ್ಯಾ ಪರಿಚಯವಾಗಿ ಪ್ರೀತಿಯಾಗಿದೆ. ತನ್ನನ್ನು ಮದುವೆಯಾಗುವಂತೆ ಸೌಮ್ಯ ಸೃಜನ್ ನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಕೋಪಗೊಂಡ ಸೃಜನ್ ಸೌಮ್ಯಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.
ಸೌಮ್ಯ ತೀರ್ಥಹಳ್ಳಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಜುಲೈ 2 ರಂದು ಕೊಪ್ಪದಿಂದ ತೀರ್ಥಹಳ್ಳಿಗೆ ಹೋಗಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಾಳೆ. ಈಗ ಬೇಡ, ಮನೆಗೆ ಹೋಗು ಮುಂದೆ ನೋಡೋಣಾ ಎಂದು ಸಮಾಧಾನ ಮಾಡಲು ಮುಂದಾಗಿದ್ದಾನೆ. ಇದಕ್ಕೆ ಯುವತಿ ಒಪ್ಪದಿದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಸೃಜನ್ ಸೌಮ್ಯಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಮೃತದೇಹವನ್ನು ಮುಂಬಾಳು ಬಳಿ ಹೂತಿಟ್ಟಿದ್ದಾನೆ.

ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಮಗಳು ಮನೆಗೆ ಬರದಿದ್ದಾಗ ಆತಂಕ ಕೊಂಡ ಪೋಷಕರು ಕೊಪ್ಪ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರ ವಿಚಾರಣೆ ವೇಳೆ ತನ್ನನ್ನು ಹುಡುಕಿಕೊಂಡು ಸಾಗರಕ್ಕೆ ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟಿದ್ದಾಗಿ ಸೃಜನ್ ಬಾಯಿ ಬಿಟ್ಟಿದ್ದಾನೆ.
ಇದನ್ನೂ ಓದಿ: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ರಿಲೀಸ್.!; ಆದರೆ, ಈ ಕೆಲಸ ಮಾಡುವುದು ಕಡ್ಡಾಯ













