ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಒಂದು ವಾರದೊಳಗೆ ಆರು ಜನ ನಕ್ಸಲರು ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್ ಮಾಡ್ದೆ ಈ ಸುದ್ದಿ ಓದಿ

ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಗಳು ಘನತೆಯುತವಾಗಿ ನಡೆಯಬೇಕು. ಅವರ ಆತ್ಮಗೌರವಕ್ಕೆ ಧಕ್ಕೆಯಾಗಬಾರದು. ಹೋರಾಟದ ಮಾರ್ಗ ಬದಲಿಸಿ ಪ್ರಜಾತಾಂತ್ರಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ತಡೆಯಾಗಬಾರದು ಎಂಬ ಮನವಿಯನ್ನು ಸರ್ಕಾರವೂ ಒಪ್ಪಿದ್ದು, ಈ ಕುರಿತು ಹಿರಿಯ ಐಪಿಎಸ್ ಅಧಿಕಾರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ: ಹೈಕೋರ್ಟ್; ಏನಿದು ತೀರ್ಪು?
ಹಾಗೆಯೇ ಒಂದು ವಾರದೊಳಗೆ ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಗಳು ಅಂತಿಮಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರವರ್ಗ-ಎ ವರ್ಗಕ್ಕೆ ಸೇರಿದವರಿಗೆ ₹7.50 ಲಕ್ಷ, ಪ್ರವರ್ಗ-ಬಿ ವರ್ಗಕ್ಕೆ ₹4 ಲಕ್ಷ ಆರ್ಥಿಕ ನೆರವನ್ನು ಮೂರು ಹಂತಗಳಲ್ಲಿ ನೀಡಲಾಗುವುದು. ಕೌಶಲ ತರಬೇತಿ ನೀಡಲಾಗುವುದು. ಕೇರಳ, ಕರ್ನಾಟಕ, ತಮಿಳುನಾಡು ಸೇರಿ ಎಲ್ಲಾ ಸರ್ಕಾರಗಳೂ ನಕ್ಸಲರ ಬಗ್ಗೆ ಅನುಕಂಪದಿಂದಲೇ ವರ್ತಿಸುತ್ತವೆ ಎಂಬ ಭರವಸೆಯನ್ನು ಸರ್ಕಾರ ನೀಡಿದೆ ಎನ್ನಲಾಗಿದೆ.
ಇದನ್ನೂ ಓದಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 10,000 ಸ್ಕಾಲರ್ ಶಿಪ್; ಯಾರು ಅರ್ಹರು, ಇಲ್ಲಿದೆ ನೋಡಿ
ನಕ್ಸಲರ ಬೇಡಿಕೆಗಳೇನು?
* ಭೂಮಿ ಇಲ್ಲದ ಕುಟುಂಬಕ್ಕೆ ಐದು ಎಕರೆ ಕೃಷಿ ಭೂಮಿ ನೀಡಬೇಕು, ಶಾಶ್ವತ ಹಕ್ಕುಪತ್ರ ನೀಡಬೇಕು.
* ಎಲ್ಲಾ ಆದಿವಾಸಿ ಕುಟುಂಬಗಳಿಗೆ ಭೂಮಿ ಮತ್ತು ವಸತಿ ನೀಡಬೇಕು.
* ಕೃಷಿ ಯೋಗ್ಯ ಪಾಳುಭೂಮಿಯನ್ನು ಭೂಹೀನರಿಗೆ ಹಂಚಬೇಕು. ಆಹಾರದ ಬೆಳೆ, ಮುಖ್ಯವಾಗಿ ಭತ್ತ ಬೆಳೆಯುವ ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಅವರಿಗೆ ಸಂಪೂರ್ಣ ಬೆಂಬಲವಾಗಿ ನಿಲ್ಲಬೇಕು.
* ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು.
* ಹೈಟೆಕ್ ಟೂರಿಸಂ ನಿಲ್ಲಸಿ ಪರಿಸರ ರಕ್ಷಿಸಬೇಕು.
* ಆದಿವಾಸಿಗಳಿಗೆ ಕಾಡಿನ ಮೇಲಿನ ಎಲ್ಲ ರೀತಿಯ ಅಧಿಕಾರ ಇರಬೇಕು
* ಕುದುರೆಮುಖ ರಾಷ್ಟ್ರೀಯ ಉದ್ಯಾನವನ ರದ್ದಾಬೇಕು.
* ನಿರುದ್ಯೋಗಿಗಳಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗ ಕೊಡಬೇಕು.
* ಸಾಂಸ್ಕೃತಿಕ ಬದಲಾವಣೆಗಳಿಂದ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.
* ಹವಾಮಾನ ಬದಲಾವಣೆಯಿಂದ ಕೃಷಿ ಬೆಳೆ, ಮನುಷ್ಯನ ಬದುಕು ಮತ್ತು ಪ್ರಕೃತಿಯ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು.
* ಮೂರು ರಾಜ್ಯಗಳಲ್ಲಿ (ಕರ್ನಾಟಕ, ತಮಿಳುನಾಡು, ಕೇರಳ) ರೈತರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು.
* ರೈತರ ಒತ್ತುವರಿ ಭೂಮಿ ತೆರವುಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ; ಈ ದಿನ ಲಾಸ್ಟ್ ಡೇಟ್, ಇಲ್ಲಿದೆ ನೋಡಿ ಡಿಟೈಲ್ಸ್












