ಶೃಂಗೇರಿ: ಅಡಿಕೆ ಬೆಳೆಗಾರರ ಸಂಕಷ್ಟ ಪರಿಹಾರಕ್ಕಾಗಿ ಶಾರದೆಯ ಸನ್ನಿಧಿಯಲ್ಲಿ ಲಕ್ಷ ಕುಂಕುಮಾರ್ಚನೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶಾರದಾ ಪೀಠದಲ್ಲಿ ಫೆ.14 ಬುಧವಾರದಂದು (ನಾಳೆ) ಅಡಿಕೆ ಬೆಳೆಗಾರರಿಂದ ಲಕ್ಷ ಕುಂಕುಮಾರ್ಚನೆ, ಲಲಿತಾಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

 

ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಅಡಿಕೆ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗದ ಬಾಧೆಯ ಸಂಕಷ್ಟದಲ್ಲಿರುವ ರೈತರು ಕಳೆದ ವರ್ಷ ಶಾರದಾ ಪೀಠದ ಉಭಯ ಗುರುಗಳಲ್ಲಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪರಿಹಾರವಾಗಿ ಕೋಟಿ ಕುಂಕುಮಾರ್ಚನೆ ಮತ್ತು ಲಲಿತಾ ಹೋಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಶಾರದಾಂಬಾ ಸನ್ನಿಧಿಯಲ್ಲಿ ಲಲಿತಾಹೋಮ, ಲಕ್ಷ ಕುಂಕುಮಾರ್ಚನೆ ನಡೆಯಲಿದೆ. ರಾತ್ರಿ ಅಮ್ಮನವರಿಗೆ ದಿಂಡಿ ಉತ್ಸವ, ಈಶ್ವರಗಿರಿಯ ಮಲಹಾನಿಕರೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಏಕ ದಶವಾರ ರುದ್ರಾಭಿಷೇಕ ಮತ್ತು ರುದ್ರಹೋಮ ನಡೆಯಲಿದೆ. ಮಠದಲ್ಲಿ ರೈತರ ಪರವಾಗಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಅಡಿಕೆ ಬೆಳೆಗಾರರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 

ಬೈಕ್‌ ಚಲಾಯಿಸಿದ ಅಪ್ರಾಪ್ತ ಬಾಲಕ | ತಾಯಿಗೆ 30 ಸಾವಿರ ದಂಡ!

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ಕೊಟ್ಟ ಬಾಲಕನ ತಾಯಿಗೆ 30 ಸಾವಿರ ರೂಪಾಯಿ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

 

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ

2024 ರ ಜನವರಿ 30 ರಂದು ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪಿ.ಎಸ್.ಐ ನವೀನ್ ಕುಮಾರ್ ಮಠಪತಿ ಅವರು ಶಿವಮೊಗ್ಗ ನಗರದ ಎಸ್ ಪಿ.ಎಂ ರಸ್ತೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕ ಯಾವುದೇ ಚಾಲನಾ ಪರವಾನಗಿ ಪತ್ರವಿಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದು ಕಂಡು ಬಂದಿದ್ದು, ಇದನ್ನ ಗಮನಿಸಿದ ಪಿ.ಎಸ್.ಐ ಅಪ್ರಾಪ್ತನಿಗೆ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಬಾಲಕನ ತಾಯಿ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿದ್ದರು. ಪ್ರಕರಣ ಸಂಬಂಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ

ಇದೀಗ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ಬಾಲಕನ ತಾಯಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 30 ಸಾವಿರ ರೂ ದಂಡ ವಿಧಿಸಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.