ತರೀಕೆರೆ; ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿ: ಇಬ್ಬರು ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಹಾಗೂ ಧನುಷ್ (20) ಸ್ಥಳದಲ್ಲೇ ಮೃತಪಟ್ಟ ಯುವಕರು.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ


ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.


ಇದನ್ನೂ ಓದಿ; 10th, 12th ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಈ ಷರತ್ತು ಕಡ್ಡಾಯ


ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಇದನ್ನೂ ಓದಿ; ಕೋಟಕ್ ಲೈಫ್ ಇನ್ಶೂರೆನ್ಸ್ ವತಿಯಿಂದ ವಿದ್ಯಾರ್ಥಿವೇತನ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 30,000 ಸ್ಕಾಲರ್ ಶಿಪ್;  ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.