ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಾಡುಕೋಣ ದಾಳಿಯಿಂದ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ

ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡುಕೋಣ ದಾಳಿ ಮಾಡಿದೆ. ಕಾಡುಕೋಣ ದಾಳಿ ಮಧ್ಯೆಯೂ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ದಾಳಿಯಿಂದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ
ಈ ಭಾಗದಲ್ಲಿ ಅರಣ್ಯ ಇಲಾಖೆಯವರು ಹುಲಿ ಬಿಟ್ಟಿದ್ದಾರೆ ಅದರಿಂದಲೇ ದಾಳಿಯಾಗಿದೆ ಎಂದು ಸ್ಥಳೀಯರು ಆತಂಕಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಈ ಬಗ್ಗೆ ಅರಣ್ಯ ಇಲಾಖೆ ಪರಿಶೀಲಿಸಿದಾಗ ಕಾಡು ಕೋಣ ದಾಳಿ ಎಂಬುದು ದೃಢಪಟ್ಟಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್ ಶಿಪ್ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ












