ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತಣಿಗೆಬೈಲು ಗ್ರಾಮದ ಅರೇಕಾ ಗ್ರೀವ್ಸ್ ಎಸ್ಟೇಟ್ ನಲ್ಲಿ ನಡೆದಿದೆ. ವಿನೋದಾ (55) ಕಾಡಾನೆ ದಾಳಿಗೆ ಸಾವನ್ನಪ್ಪಿದ ಕಾರ್ಮಿಕ ಮಹಿಳೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ವಿನೋದಾ ಅವರ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದು ಭದ್ರಾ ಅರಣ್ಯ ವಲಯಕ್ಕೆ ಸೇರಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ತಣಿಗೆಬೈಲು ರೇಂಜ್ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ರೈತರ ಬೆಳೆಗಳ ಮೇಲೆ ಹಾಗೂ ಮಾನವರ ಮೇಲೆ ದಾಳಿ ನಡೆಸುತ್ತಿದೆ. ಇದರಿಂದ ಪ್ರಾಣ ಹಾನಿ ಹೆಚ್ಚಾಗಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.
ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ















