ಹರೆಯದ ಯುವಕನೊಂದಿಗೆ ಆಂಟಿಯ ಕಾಮಪ್ರಸಂಗ: ಕೇಳಿದ್ದಕ್ಕೆ ಗಂಡನಿಗೇ ಇಟ್ಟಳು ಮರಣ ಮುಹೂರ್ತ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪತ್ನಿಯ ಅನೈತಿಕ ಸಂಬಂಧಕ್ಕೆ ಪತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪತ್ನಿಯೇ ಪತಿಗೆ ವಿಷ ಉಣಿಸಿ ಕೊಲೆ ಮಾಡಿದ್ದಾಳೆ. ಜಯಣ್ಣ (42) ಮೃತ ದುರ್ದೈವಿಯಾಗಿದ್ದು, ಪತ್ನಿ ಶೃತಿ (35) ಹಾಗೂ ಆಕೆಯ ಪ್ರಿಯಕರ ಕಿರಣ್ (27) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ಇದನ್ನೂ ಓದಿ: ಏರಿಕೆಯ ಹಾದಿಯಲ್ಲಿ ಅಡಿಕೆ ರೇಟ್; ಇಲ್ಲಿದೆ ನೋಡಿ ಇವತ್ತಿನ ರೇಟ್


ಏನಿದು ಪ್ರಕರಣ?:
ದೊಡ್ಡಿಬೀರನಹಳ್ಳಿ ಗ್ರಾಮದ ಜಯಣ್ಣ ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ, ಕಳೆದ 15 ರಂದು(ಶನಿವಾರ) ರಾತ್ರಿ ಏಕಾಏಕಿ ಸಾವನ್ನಪ್ಪಿದ್ದರು. ಈ ವೇಳೆ ಗಂಡ ಹೊಟ್ಟೆ ನೋವಿನಿಂದ ಬಳುತ್ತಿದ್ದರು. ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋದರು ಫಲಕಾರಿ ಆಗಿಲ್ಲ ಎಂದು ನಾಟಕ ಮಾಡಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಳಂತೆ. ಆದರೆ, ಮೃತ ಜಯಣ್ಣ ಸಂಬಂಧಿಕರಿಗೆ ಸಾವಿನ ಬಗ್ಗೆ ಅನುಮಾನ ಬಂದಿದ್ದು, ಈ ಬಗ್ಗೆ ಆತನ ಮಗಳನ್ನು ಕೇಳಿದ ವೇಳೆ ಅಪ್ಪನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಿಲ್ಲ ಎಂದು ಹೇಳಿದ್ದರಂತೆ. ಬಳಿಕ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಶವ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪತ್ನಿಗೆ ಶಾಕ್ ಕೊಟ್ಟಿದ್ದರು.


ಇದನ್ನೂ ಓದಿ: ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್


ಸದ್ಯ ಮಗಳಿಂದ ಹತ್ಯೆಯ ಹಿಂದಿನ ಅಸಲಿ ಕಥೆ ರಿವಿಲ್ ಆಗಿದ್ದು, ವಿಚಾರಣೆ ವೇಳೆ ಮೃತ ಜಯಣ್ಣನ ಅಣ್ಣನ ಮಗ ಕಿರಣ್ ಜೊತೆ ಅನೈತಿಕ ಸಂಬಂಧ ಇದಿದ್ದು ದೃಢವಾಗಿದೆ. ಅಲ್ಲದೇ ಮರಣೋತ್ತರ ವರದಿಯಲ್ಲಿ ಕೊಲೆ ಮಾಡಿರುವುದು ಗೊತ್ತಾಗಿದೆ. ಆರೋಪಿಗಳಾದ ಮೃತನ ಪತ್ನಿ ಶೃತಿ ಹಾಗೂ ಮಗ ಕಿರಣ್ ರನ್ನು ಸಖರಾಯಪಟ್ಟಣ ಠಾಣೆ ಪೊಲೀಸ್ ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಈ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ; ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೀಟ್ ಪರೀಕ್ಷೆಯಲ್ಲಿ ಅಕ್ರಮ : ತನಿಖೆಗೆ ಆಗ್ರಹಿಸಿ ಎನ್ಎಸ್’ಯುಐ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್‌) ಅಕ್ರಮ ನಡೆದಿರುವ ಅನುಮಾನ ಇದ್ದು, ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಎನ್‍ಎಸ್‍ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‌ ಮುಖಂಡರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹನುಮಂತಪ್ಪ ವೃತ್ತದಿಂದ ಎಂ.ಜಿ. ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣಗಳಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ಈ ಬಾರಿಯ ನೀಟ್ ಫಲಿತಾಂಶದಲ್ಲಿ ಒಟ್ಟು 67 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ ಸುಮಾರು 8 ವಿದ್ಯಾರ್ಥಿಗಳು ಮೊದಲ ರ‍್ಯಾಂಕ್ ಪಡೆದಿದ್ದು, 6 ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿದ್ದಾರೆ. ಆದಕಾರಣ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷಾ ಅಕ್ರಮ ಆಗಿರುವ ಸಾಧ್ಯತೆ ಹೆಚ್ಚಿದ್ದು ಕೇಂದ್ರ ಸರ್ಕಾರ ನೀಟ್ ಅಕ್ರಮದ ತನಿಖೆ ನಡೆಸಿ ನ್ಯಾಯ ದೊರಕಿ ಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎನ್‍ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಮಂತ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಎನ್‍ಎಸ್‍ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಜಾಕೀರ್ ಹುಸೇನ್, ರಾಜ್ಯ ಕಾರ್ಯದರ್ಶಿ ಆದಿಲ್, ಜಿಲ್ಲಾ ಉಪಾಧ್ಯಕ್ಷ ದೃವಕುಮಾರ್, ವೆಂಕಟೇಶ್, ಪ್ರೀತಂ ಗೌಡ, ಸುನೀಲ್, ವಿನಯ್ ಭಾಗವಹಿಸಿದ್ದರು.
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.