ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಪ್ರೀತಿ ಹೆಸರಲ್ಲಿ ಅಪ್ರಾಪ್ತ ಬಾಲಕಿಯನ್ನ ಅಪಹರಿಸಿಕೊಂಡು ಹೋದ ಘಟನೆಯೊಂದು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ದಂದೂರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಹಾಸ್ಟೆಲ್ ನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದ 17 ವರ್ಷದ ಅಪ್ರಾಪ್ತೆಯನ್ನು ಯುವಕ ಅಪ್ರೋಜ್ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ ಎಂದು ಆರೋಪಿಸಲಾಗಿದೆ.
ಕಾಲೇಜು ಬಿಡಿಸಿ ಮನೆಗೆ ಕರೆತಂದಿದ್ದ ಪೋಷಕರು:
ಬಾಲಕಿಯ ಪೋಷಕರಿಗೆ ಅಪ್ರೋಜ್ ಎಂಬ ಯುವಕನ ಜೊತೆ ಓಡಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಆ ನಂತರ ಪೋಷಕರು ಆಕೆಯನ್ನು ಕಾಲೇಜು ಬಿಡಿಸಿ ಮನೆಗೆ ಕರೆತಂದು ಸಂಬಂಧಿಕರ ಮನೆಯಲ್ಲಿರಲು ಬಿಟ್ಟಿದ್ದರು. ಮೂರು ತಿಂಗಳಿಂದ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪ್ರೋಜ್ ಆ ಮನೆಯಿಂದ ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ. ದೋರನಾಳು ಗ್ರಾಮದಲ್ಲಿ ಸಂಬಂಧಿಯೊಬ್ಬರ ಸಾವಿಗೆ ಸಂಬಂಧಿಕರು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ: ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!
ಅಪ್ರೋಜ್ ಮೇಲೆ ಆರೋಪಿಸಿ ಬಾಲಕಿಯ ತಂದೆಯಿಂದ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ!; ಸರ್ಕಾರದಿಂದ ಮಹತ್ವದ ನಿರ್ಧಾರ












