ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡುಕೋಣ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳುರು ಹೋಬಳಿಯ ಜಾವಳಿ ಗ್ರಾಮದ ಪಾಂಡಿಮನೆ ಪ್ರದೇಶದಲ್ಲಿ ಭಾನುವಾರ ನಡೆದಿದೆ. ರಾಜು (60) ಕಾಡುಕೋಣ ದಾಳಿಗೆ ಒಳಗಾದ ವ್ಯಕ್ತಿ.
ಇದನ್ನೂ ಓದಿ: ಹೊಲಿಗೆ ಯಂತ್ರ, ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ತಮ್ಮ ಮನೆಯ ಹತ್ತಿರ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ್ದು, ಬಲಬಾಗದ ತೊಡೆಯ ಮಾಂಸ ಭಾಗವನ್ನು ಕಿತ್ತಿದೆ. ಗಾಯಗೊಂಡ ರಾಜುವರನ್ನು ತಕ್ಷಣ ಬಣಕಲ್ ಕೃಷ್ಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಡೆಯುತ್ತಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ಜಾರಿ; ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ












