ಕಡೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಶಾಕ್ ನಿಂದ 7ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಆಕಾಶ್ (13) ಮೃತ ವಿದ್ಯಾರ್ಥಿ.
ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?

ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದಾರೆ. ಮರದಿಂದ ಜಾರಿ ಬೀಳುವಾಗ ಆಕಾಶ್ ವಿದ್ಯುತ್ ತಂತಿ ಹಿಡಿದಿದ್ದು, ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಘಟನೆ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ: ಎರಡು ವರ್ಷದ ಹಿಂದೆ ಕಳವು ಮಾಡಿದ ಆರೋಪಿ ಬಂಧನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022 ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಮೂಲದ ನಲ್ಕೆ ಗ್ರಾಮದ ಶರತ್ ಬಂಧಿತ ಆರೋಪಿ
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ. ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿದ್ದ. ನಂತರ ಕಳಸದ ಹೆಮ್ಮಕ್ಕಿಯ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಇತ್ತೀಚೆಗೆ ಒಂದು ಸಿಮ್ ಖರೀದಿ ಮಾಡಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ; ಏನಿದೆ ಹೈಕೋರ್ಟ್ ಆದೇಶ
ಈ ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್, ಸಚಿನ್, ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು.












