ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (13) ಹೃದಯಾಘಾತದಿಂದ ಮೃತ ಪಟ್ಟ ವಿದ್ಯಾರ್ಥಿನಿ.
ಇದನ್ನೂ ಓದಿ; ಗ್ರಾಹಕರೇ ಗಮನಿಸಿ; ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ;ಇಲ್ಲಾಂದ್ರೆ ಹೊಸ ವರ್ಷದಿಂದ ಸಬ್ಸಿಡಿ ಆಸೆ ಬಿಡಿ!

ಈಕೆ ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸಾವನ್ನಪ್ಪಿದ್ದು, ಮೂಡಿಗೆರೆ ಎಂ.ಜಿ.ಎಂ. ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ಹೃದಯಾಘಾತ ಎಂದು ದೃಢಪಟ್ಟಿದೆ. ಇನ್ನು ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಭಾರೀ ದುರಂತ, ಮಣ್ಣಿನಡಿಯಲ್ಲಿ ಸಿಲುಕಿದ ಕಾರ್ಮಿಕರು
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಿನ್ನಲೆ ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ನಾಲ್ವರು ಕಾರ್ಮಿಕರ ಮೇಲೆ ಮಣ್ಣು ಕುಸಿದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬುಲೆನ್ಸ್ ಹಾಗೂ ಶೃಂಗೇರಿ ಪೊಲೀಸರು ಭೇಟಿ ನೀಡಿ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












