ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಿನ ಹರಿಹರದಹಳ್ಳಿಯಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಘಟಕದ ಬೇಜವಾಬ್ದಾರಿತನದಿಂದ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಹರಿಹರದಹಳ್ಳಿ ಗ್ರಾಮದ ದೇವರಾಜು ಮತ್ತು ಈರೇಗೌಡ ಅವರು ತಮ್ಮ ಜಮೀನಿಗೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಸುರಿಯಲಾಗಿದ್ದ ಬೂದಿಯ ಮೇಲೆ ಕಾಲಿಟ್ಟಿದ್ದಾರೆ. ಇದರಿಂದ ಇಬ್ಬರ ಕಾಲಿನ ಚರ್ಮ ಗಂಭೀರವಾಗಿ ಸುಟ್ಟು ಹೋಗಿದೆ. ಗಾಯಾಳುಗಳನ್ನು ತಕ್ಷಣವೇ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಬೂದಿಯ ಕೆಂಡಕ್ಕೆ ಸಿಲುಕಿ ಕೆಲವು ಮೂಕ ಪ್ರಾಣಿಗಳೂ ಸಾವನ್ನಪ್ಪಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಈ ಸಂಬಂಧ ಗಾಯಾಳು ದೇವರಾಜು ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾ ಕಾಫಿ ಕ್ಯೂರಿಂಗ್ ಘಟಕದ ಮ್ಯಾನೇಜರ್ ಹಾಗೂ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.













