ಚಿಕ್ಕಮಗಳೂರು/ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸಮೀಪದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನ ಕುಮಾರ್ (40) ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ

ಪ್ರಸನ್ನಕುಮಾರ್ ತರಕಾರಿ, ಕೊತ್ತಂಬರಿ ಸೊಪ್ಪು ವ್ಯಾಪಾರ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ಕೊತ್ತಂಬರಿ ಸೊಪ್ಪು ಸರಬರಾಜು ಮಾಡುತ್ತಿದ್ದರು. ನಿನ್ನೆ ಬೆಳಿಗ್ಗೆ ವ್ಯಾಪಾರದ ಹಣ ಬರಲು ಇದೆ, ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ತೆಗೆದು ಮಾಹಿತಿ ಹಂಚಿಕೊಂಡಿದ್ದು, ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿದೆ.

ಇದನ್ನೂ ಓದಿ; ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
ಪ್ರಸನ್ನಕುಮಾರ್ ಉತ್ತಮ ಆರ್ಥಿಕ ಹಿನ್ನಲೆ ಹೊಂದಿದ್ದು, ಇತ್ತೀಚೆಗೆ ಹೊಸ ಮನೆಯನ್ನು ಕಟ್ಟಿಸಿದ್ದರು ಎನ್ನಲಾಗಿದೆ. ಪ್ರಸನ್ನ ಕುಮಾರ್ ವಿವಾಹಿತರಾಗಿದ್ದು, ಇಬ್ಬರು ಚಿಕ್ಕ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದವರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
Balehonnuru: ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮೇಲೆ ಪೊಲೀಸರ ಫೈರಿಂಗ್
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈಯ್ಯಲು ಯತ್ನಿಸಿದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿರುವ ಘಟನೆ ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಪೂರ್ಣೇಶ್ ಎಂಬ ರೌಡಿ ಶೀಟರ್ ಮೇಲೆ ಹಲವಾರು ಕೇಸ್ ಗಳಿದ್ದು ಕೋರ್ಟ್ ಗೆ ಹಾಜರಾಗುವಂತೆ ವಾರೆಂಟ್ ಜಾರಿಮಾಡಲಾಗಿತ್ತು. ಆದರೆ ಪೂರ್ಣೇಶ್ ತಲೆಮರೆಸಿಕೊಂಡು ಓಡಾಡುತ್ತಿದ್ದ. ಇಂದು ಬೆಳಗ್ಗೆ 6:15 ಸುಮಾರಿಗೆ ಬಾಳೆಹೊನ್ನೂರು ಪಿಎಸ್ ಐ ದಿಲೀಪ್ ಕುಮಾರ್ ಕುಮಾರ್ ನೇತೃತ್ವದಲ್ಲಿ ಬಂಧಿಸಲು ತೆರಳಿದ್ದು, ಸೆರೆಂಡರ್ ಆಗುವಂತೆ ತಿಳಿಸಿದ್ದಾರೆ. ಆದರೆ ಪೂರ್ಣೇಶ್ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಗಾಳಿಯಲ್ಲಿ ಎರಡು ಸುತ್ತು ಗುಂಡು ಹೊಡೆದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಸಬ್ ಇನ್ಸ್ಪೆಕ್ಟರ್ ದಿಲೀಪ್ ಫೈರಿಂಗ್ ಮಾಡಿದ್ದಾರೆ.
ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪೊಲೀಸರಿಂದ ಗುಂಡು ತಿಂದ ರೌಡಿ ಶೀಟರ್ ಪೂರ್ಣೇಶ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಂ, ಕೊಪ್ಪ ಡಿವೈ ಎಸ್ ಪಿ ಅನಿಲ್ ಮಹದಾಸ್ ಭೇಟಿ ನೀಡಿದ್ದಾರೆ.
ಪೂರ್ಣೇಶ್ ಮೇಲೆ 4 ಕೊಲೆ ಯತ್ನದ ಕೇಸ್ ಸೇರಿದಂತೆ ಒಟ್ಟು 8 ಕೇಸ್ ಗಳು ಇವೆ. ಕೋರ್ಟ್ ಗೆ ಹಾಜರಾಗುವಂತೆ ವಾರೆಂಟ್ ಜಾರಿ ಮಾಡಲಾಗಿತ್ತು ಆದ್ರೆ ಪೂರ್ಣೇಶ್ ದೊಡ್ಡ ಮರಗಳ ಮೇಲೆ, ಕಾಡು, ಕಾಫಿತೋಟದಲ್ಲಿ ಅಡಗಿ ಕುಳಿತಿರುತ್ತಿದ್ದ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












