ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಬಿಜೆಪಿ ಮುಖಂಡ ಅಜಿತ್ ತುಪ್ಪರು ಎಂಬುವರಿಗೆ ಸೇರಿದ ತೋಟ ಇದಾಗಿದ್ದು, ಸುಮಾರು 2 ಎಕರೆ ತೋಟದಲ್ಲಿ ಬೆಳೆಯಲಾಗಿದ್ದ 750ಕ್ಕೂ ಹೆಚ್ಚು ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಫಸಲಿಗೆ ಬಂದಿದ್ದ 10 ವರ್ಷದ ಕಾಫಿ ಗಿಡಗಳನ್ನೂ ಬಿಡದೆ ಕಿಡಿಗೇಡಿಗಳು ಗಿಡಗಳ ಬುಡಕ್ಕೆ ಕೊಡಲಿ ಹಾಕಿದ್ದಾರೆ. ದಶಕಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ್ದ ಕಾಫಿತೋಟವನ್ನು ಕಳೆದುಕೊಂಡ ಬಿಜೆಪಿ ಮುಖಂಡ ಅಜಿತ್ ಕುಟುಂಬ ಆತಂಕಕ್ಕೀಡಾಗಿದ್ದಾರೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















