ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರ ಮಟ್ಟದ ಎನ್ಸಿಸಿ ಶಿಬಿರಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದದ ಮಾನ್ಯ ಕೆಂಚೈನ್ ಡಿ.ಜೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ

ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಎನ್ಸಿಸಿ ಶಿಬಿರ- ಆಲ್ ಇಂಡಿಯಾ ವಾಯು ಸೈನಿಕ್ ಕ್ಯಾಂಪ್ ಗೆ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ನಿಂದ ಮಾನ್ಯ ಆಯ್ಕೆಯಾಗಿದ್ದಾರೆ. ಇವರು ನ್ಯಾಯಾಧೀಶರಾದ ಜಯಪ್ರಕಾಶ್ ದೇವವೃಂದ ಹಾಗೂ ವಿನುತಜಯಪ್ರಕಾಶ್ ರವರ ಪುತ್ರಿಯಾಗಿದ್ದು, ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 26.09.2023
ಇದೀಗ ಶಿಬಿರದಲ್ಲಿ ಸ್ಕೀಟ್ ಶೂಟಿಂಗ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ.
ಚಿಕ್ಕಮಗಳೂರು; ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್ ನಿಧನ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್ ಅವರು ನಿನ್ನೆ ತಡರಾತ್ರಿ ಸುಮಾರು 12:15ಕ್ಕೆ ನಿಧನ ಹೊಂದಿದ್ದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕನ್ನಡ ನಾಡು, ನುಡಿ, ನೆಲ-ಜಲ ಪರವಾದ ಹೋರಾಟ ಹಾಗೂ ಸಂಘಟನಾ ಕಾರ್ಯಗಳಲ್ಲಿ ಜಿಲ್ಲೆಯ ಉದ್ದಗಲಕ್ಕೂ ಪಾದರಸದಂತೆ ಓಡಾಡಿಕೊಂಡು ಜನ ಜಾಗೃತಿ ಮತ್ತು ಅರಿವು ಮೂಡಿಸುವಲ್ಲಿ ಶ್ರಮಿಸಿದವರ ಪೈಕಿ ಅಗ್ರಗಣ್ಯರಾದವರು ತೇಗೂರು ಜಗದೀಶ್. ಇವರ ಅಕಾಲಿಕ ಮರಣದಿಂದ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳು, ಜನಸಾಮಾನ್ಯರು ಕಂಬನಿ ಮಿಡಿದಿದ್ದಾರೆ.
ಜಗದೀಶ್ ಅವರು ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯವಾಗಿಯೇ ಇದ್ದ ಅವರು ಈಗ್ಗೆ ಕೆಲ ತಿಂಗಳ ಹಿಂದೆ ಇದ್ದಕ್ಕಿದಂತೆ ಅನಾರೋಗ್ಯಕ್ಕೀಡಾಗಿದ್ದರು. ಅವರು ಮೆದುಳು ಸಂಬಧಿ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇನ್ನು ಇವರ ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ಮಧ್ಯಾಹ್ನ 3 ಗಂಟೆಯ ವೇಳೆಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ 7 ಕ್ಕೂ ಅಧಿಕ ಕಾಡಾನೆಗಳು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ.
ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.












