ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ನೇಣು ಬಿಗಿದು ವಿದ್ಯಾರ್ಥಿನಿವೊರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೊಡಿಗೆ ರಮೇಶ್ ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಇದನ್ನೂ ಓದಿ: ಬಿಹಾರ ಚುನಾವಣೆ ಫಲಿತಾಂಶ; ಅಭೂತಪೂರ್ವ ಜಯದತ್ತ ಹೆಜ್ಜೆ ಹಾಕಿದ ಎನ್ಡಿಎ

ಬಾಳೆಬೈಲು ಕಾಲೇಜಿನಲ್ಲಿ ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ಬೆಳಗಿನಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ












