ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಅಶ್ವಿನಿ (19) ಮೃತಪಟ್ಟ ವಿಧ್ಯಾರ್ಥಿನಿ
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ತಾಲೂಕಿನ ಸರ್ಕಾರಿ ಪದವಿ ಕಾಲೇಜು ಒಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಕೂಡಲೇ ಅಶ್ವಿನಿಯವರನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ದುರದೃಷ್ಟವಶಾತ್, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅಶ್ವಿನಿ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












