ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನಿನ್ನೆ ನಡೆದ ಕ್ಯಾಂಟರ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಲ್ಲಿ ಸ್ಕೂಟರ್ ಸವಾರ ಇದೀಗ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸಾಗರ್ (22) ಮೃತಪಟ್ಟ ಸ್ಕೂಟರ್ ಸವಾರ.
ಇದನ್ನೂ ಓದಿ: PUC ಅಲ್ಲಿ 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಮಿಸ್ ಮಾಡ್ದೆ ಈ ಸುದ್ದಿ ಓದಿ

ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ಸವಾರ ಸಾಗರ್ ಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ















