
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕು ಪಂಚಾಯಿತಿಯಲ್ಲಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ (E.O.) ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಸುದೀಪ್ ವಿರುದ್ಧ ದೂರು ಸ್ವೀಕೃತವಾಗಿದ್ದು, ದೂರಿನ ಅಂಶಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತಾಲಯದಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ

ಕೊಪ್ಪ ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿ ಸದಸ್ಯ ಈ ಕುರಿತು ದೂರು ನೀಡಿದ್ದು, ಹಲವು ಗಂಭೀರ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಾಫಿ ಲೋಡ್ ಸಾಗಿಸುತ್ತಿದ್ದ ಲಾರಿಗೆ ಅಡ್ಡಗಟ್ಟಿ ಹಲ್ಲೆ ನಡೆಸಿದ ಆರೋಪ, ತುಂಗಾ ನದಿಯ ದಡದಲ್ಲಿ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಅಕ್ರಮವಾಗಿ ಅನುಮತಿ ನೀಡಲಾಗಿದೆ ಎಂಬ ಆರೋಪವೂ ಮಾಡಲಾಗಿದೆ. ಜೊತೆಗೆ ಸುದೀಪ್ 2016ರಲ್ಲಿ ಶೃಂಗೇರಿ ತಾಲ್ಲೂಕು ಪಂಚಾಯಿತಿಗೆ ಎ.ಡಿ. ಹುದ್ದೆಗೆ ಇನ್‌ಚಾರ್ಜ್ ಆಗಿ ಬಂದಿದ್ದು, ಪ್ರಸ್ತುತ ಶೃಂಗೇರಿ ಹಾಗೂ ಮೂಡಿಗೆರೆ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಹಣಾಧಿಕಾರಿ ಹುದ್ದೆಗಳನ್ನೂ ಪ್ರಭಾರವಾಗಿ ವಹಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!
ಇದಲ್ಲದೆ, ಒಬ್ಬ ಪಿ.ಡಿ.ಒ. ಅಧಿಕಾರಿ ಹಲವು ವರ್ಷಗಳಿಂದ ಎ.ಡಿ. ಹಾಗೂ ಇ.ಒ. ಹುದ್ದೆಗಳನ್ನು ಪ್ರಭಾರವಾಗಿ ನಿರ್ವಹಿಸುತ್ತಿರುವುದು ಕಾನೂನುಬಾಹಿರವಾಗಿದ್ದು, ತಕ್ಷಣವೇ ಇನ್‌ಚಾರ್ಜ್ ಹುದ್ದೆಗಳನ್ನು ರದ್ದುಪಡಿಸಿ ಸೂಕ್ತ ವಿಚಾರಣೆ ನಡೆಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿ ಕೈಗೊಂಡ ಕ್ರಮಗಳ ವರದಿಯನ್ನು ತುರ್ತಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಯುಕ್ತಾಲಯದಿಂದ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆ ಉಳಿತಾಯದ ಜೊತೆಗೆ ಭರ್ಜರಿ ಲಾಭ; ಹೆಣ್ಣು ಮಕ್ಕಳ ಭವಿಷ್ಯಕ್ಕೆ ಬಲ, ಸಣ್ಣ ಹೂಡಿಕೆ, ದೊಡ್ಡ ಭವಿಷ್ಯ
















