
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರೆಸಾರ್ಟ್ ಮತ್ತು ಹೋಂಸ್ಟೇಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸುವಂತೆ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಮತ್ತೆ ಪರಿಷ್ಕರಣೆ!; ಅನರ್ಹರಿಗೆ ರದ್ದಾಗುತ್ತಾ?

ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ಸ್ಟೇ / ರೆಸಾರ್ಟ್ʼಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂದು ತಿಳಿಸಿದೆ. ಹೊರವಲಯ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿ, ಅನುಮತಿ ಪಡೆಯಬೇಕೆಂದು ಹೇಳಿದೆ.

ಪೊಲೀಸ್/ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿ ಪಡೆಯದೇ ನಿರ್ಜನ ಪ್ರದೇಶ/ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋದರೆ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಮಾಲೀಕರೇ ಜವಾಬ್ದಾರರಾಗುತ್ತಾರೆ ಹಾಗೂ ಕಾನೂನು ಅನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಅಡುಗೆಮನೆಯಲ್ಲಿ ಈ 2 ಪಾತ್ರೆಗಳನ್ನ ಉಲ್ಟಾ ಇಡಬೇಡಿ!; ಲಕ್ಷ್ಮಿ ಮುನಿಸಿಗೆ ನೀವು ಬಡವರಾಗ್ತೀರಿ!
ಇತ್ತೀಚಿಗೆ ಗಂಗಾವತಿಯ ಆನೆಗುಂದಿಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯೊಬ್ಬರ ಕೊಲೆ ಪ್ರಕರಣ ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 1003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 15,000 ಸಂಬಳ













