ಬಾಳೆಹೊನ್ನೂರು: ಜಿಲ್ಲಾ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಇಂದಿನ ಯುವಕರು ಯುವ ಸಮುದಾಯದ ಸಂಘಟನೆಗಾಗಿ ಆಸಕ್ತಿ ತೋರಿಸುತ್ತಿರುವುದು ವಿಶೇಷವಾಗಿದೆ ಎಂದು ಅಮ್ಮ ಫೌಂಡೇಶನ್ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಹೇಳಿದರು.


ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್‌ ಆಫರ್‌; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ


ಬಾಳೆಹೊನ್ನೂರಿನಲ್ಲಿ ಬಂಟರ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಂಟ ಸಮುದಾಯದ ಯುವಕ ಯುವತಿಯರು ಉನ್ನತ ಹುದ್ದೆಗೆ ಏರಬೇಕು. ಈ ನಿಟ್ಟಿನಲ್ಲಿ ಬಂಟ ಸಮುದಾಯದ ಯುವಕ ಯುವತಿಯರು ಐಎಎಸ್ ತರಬೇತಿ ಪಡೆಯುವುದಾದರೆ ತಮ್ಮ ಅಮ್ಮ ಫೌಂಡೇಶನ್ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.


ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಬಂಟರ ಯಾನೆ ನಾಡವರ ಸಂಘದ ಗೌರಾವಾಧ್ಯಕ್ಷರು ಡಾ.ಸುನಿಲ್ ಕುಮಾರ್ ರೈ ಮಾತನಾಡಿ,  ಜಿಲ್ಲಾ ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಿ ನೆರವೇರಿರುವುದು ಯುವಕರ ಪರಿಶ್ರಮಕ್ಕೆ ಸಾಕ್ಷಿಯಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಿಕೆಡಿ ಖ್ಯಾತಿಯ ಮುಂಬಯಿನ ಶಶಿ ಶೆಟ್ಟಿ ಮಾತನಾಡಿ, ಇಂದಿನ ಯುವಕರು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದರು.


ಇದನ್ನೂ ಓದಿ: SBI ಯಲ್ಲಿ ಜಾಬ್‌ ಆಫರ್‌; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್‌ ಇಲ್ಲಿದೆ


ಜಿಲ್ಲಾ ಮಟ್ಟದ ಕ್ರಿಕೆಟ್ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನವನ್ನು ಬಾಳೆಹೊನ್ನೂರಿನ ಮಹೇಶ್ ಕ್ರಿಕೆಟ್ ತಂಡ, ದ್ವಿತೀಯ ಸ್ಥಾನ ಕೊಪ್ಪ ಯೂತ್ ಬಂಟ್ಸ್, ತೃತೀಯ ಸ್ಥಾನ ಶೃಂಗೇರಿ ಯೂತ್ ಬಂಟ್ಸ್ ತಂಡಗಳಿಗೆ ನಗದು ಬಹುಮಾನ ಮತ್ತು ಪಾರಿತೋಷಕ ನೀಡಲಾಯಿತು.

ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ವಿಭಾಗದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಸತ್ಕರಿಸಲಾಯಿತು. ಹಾಗೆಯೇ ಮಹಿಳೆಯರ ಕ್ರೀಡೆಗಳಲ್ಲಿ ವಿಜೇತರಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪಾರಿತೋಷಕ ನೀಡಲಾಯಿತು.


ಇದನ್ನೂ ಓದಿ: ಇ-ಖಾತೆ ಪಡೆಯುವವರ ಗಮನಕ್ಕೆ; ಬಿಗ್‌ ಅಪ್ಡೇಟ್‌ ಇಲ್ಲಿದೆ ನೋಡಿ


ರಮೇಶ್ ಶೆಟ್ಟಿ ಸ್ವಾಗತಿಸಿ, ಸೌಮ್ಯ ರೈ ಪ್ರಾರ್ಥಿಸಿ ವಂದಿಸಿದರು. ಹೆಚ್.ಆರ್.ಆನಂದ್ ಶೆಟ್ಟಿ ಪ್ರಾಸ್ತಾವಿಕ ನುಡಿ ನುಡಿದರು. ಆರ್.ಜಿ.ಮಂಜುನಾಥ್ ಶೆಟ್ಟಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಶೆಟ್ಟಿ, ಸನಂತ್ ಶೆಟ್ಟಿ, ಸಂತೋಷ್ ಶೆಟ್ಟಿ, ರವಿ ಶೆಟ್ಟಿ, ಸುದರ್ಶನ ಶೆಟ್ಟಿ ಹಾಗೂ ಅನೇಕ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.