ಕಾಂಗ್ರೆಸ್ ಗೆ ಮತ್ತೊಮ್ಮೆ ಹಿನ್ನಡೆ: ಶಾಸಕ ಜೀವರಾಜ್ ವಿರುದ್ಧದ FIR ಗೆ ಹೈಕೋರ್ಟ್ ತಡೆ

ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಈ ಪ್ರಕರಣದಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್, ಅಂದಿನ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹಾಗೂ ಚುನಾವಣಾಧಿಕಾರಿ ವೇದಾಮೂರ್ತಿ ಅವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಕಾಂಗ್ರೆಸ್ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಈ ಕಾನೂನು ಕ್ರಮ ಜರುಗಿಸಲಾಗಿತ್ತು, ಆದರೆ ಈಗ ನ್ಯಾಯಾಲಯವು ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ಸಂಬಂಧಪಟ್ಟವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಸದ್ಯ ಈ ಪ್ರಕರಣದ ಮುಂದಿನ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ಹೈಕೋರ್ಟ್‌ನ ನಿರ್ದೇಶನದಂತೆ ನಡೆಯಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ..?

ಸುಧೀರ್ ಕುಮಾರ್ ಮುರೋಳ್ಳಿ ಅಂಚೆ ಮತ ಎಣಿಕೆ ಟೇಬಲ್‌ನ ಏಜೆಂಟ್ ಆಗಿದ್ದರು. ಮತಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ ಮತ್ತು ಟ್ರಂಕ್‌ಗಳ ಲಾಕ್ ಕಟ್ ಆಗಿತ್ತು ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ. ಮತ ಪತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಂಚನೆ, ಕ್ರಿಮಿನಲ್ ಪಿತೂರಿ ಹಾಗೂ ಫೋರ್ಜರಿ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಅವರನ್ನು A1 ಆರೋಪಿ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು A2 ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರನ್ನು A3ಯನ್ನಾಗಿ ಪರುಗಣಿಸಲಾಗಿದೆ.

ಹೈಕೋರ್ಟ್ ಹಾಗೂ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಮುನ್ನಡೆ ಪಡೆದು ಅಂತಿಮವಾಗಿ ಜಯಗಳಿಸಿದ್ದಾರೆ. ಈ ಮೂಲಕ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ 2026 ರಲ್ಲಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಟ್ವಿಸ್ಟ್ ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದೆ. ಇದರಿಂದ ಫಲಿತಾಂಶದ ಚಿತ್ರಣ ಬದಲಾಗಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಅಧಿಕೃತವಾಗಿ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.