
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡೆ ಚೇತನಾ ಅವರ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಹಾಗೂ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಅನ್ನು ಪೊಲೀಸರು ಭಾರತ–ನೇಪಾಳ ಗಡಿ ಭಾಗದಲ್ಲಿ ಬಂಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಕಳೆದ ವಾರ ಚೇತನಾ ಅವರ ನಿವಾಸಕ್ಕೆ ನುಗ್ಗಿದ ರಾಹಿಲ್ ಶರೀಫ್, ಮಾರಕಾಸ್ತ್ರದಿಂದ ದಾಳಿ ನಡೆಸಿದ್ದ. ದಾಳಿ ಬಳಿಕ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಆತ, ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದನು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಇನ್ಸ್‌ಪೆಕ್ಟರ್ ಅಭಯಪ್ರಕಾಶ್ ನೇತೃತ್ವದ ಪೊಲೀಸ್ ತಂಡ ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಭಾರತ–ನೇಪಾಳ ಗಡಿ ಭಾಗದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಬಂಧಿತ ರಾಹಿಲ್ ಶರೀಫ್‌ನ್ನು ಈಗ ಪೊಲೀಸ್ ಕಸ್ಟಡಿಯಲ್ಲಿ ಚಿಕ್ಕಮಗಳೂರಿಗೆ ಕರೆತರಲಾಗುತ್ತಿದೆ.













