ಮೂಡಿಗೆರೆ: ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಭಾರಿ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಚುನಾವಣೆಯಲ್ಲಿ ಕೊನೆಗೂ ಕಾಂಗ್ರೆಸ್ ಪಕ್ಷ ಗೆದ್ದು ಬೀಗಿದೆ.


ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…


ಅಧ್ಯಕ್ಷ ಗಾದಿ ಹಿಡಿಯಲು ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಭಾರೀ ಕಸರತ್ತು ನಡೆಸಿದ್ದವು. ಅಲ್ಲದೇ ಅಧ್ಯಕ್ಷ ಗಾದಿ ಏರಲು ಕಾಂಗ್ರೆಸ್ ಹಾಗೂ ಬಿಜೆಪಿ ಪಟ್ಟಣ ಪಂಚಾಯಿತಿ ಸದಸ್ಯರು ಕುದುರೆ ವ್ಯಾಪಾರ ಕುರಿತು ಮಾತನಾಡಿದ್ದ ಆಡಿಯೋ ತೀವ್ರ ಸಂಚಲನವನ್ನು ಸೃಷ್ಟಿಸಿತ್ತು. ಆದರೆ, ಈಗ ಇದೆಲ್ಲದಕ್ಕೂ ಉತ್ತರ ಸಿಕ್ಕಿದ್ದು, ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. ಇದರಿಂದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

ಪಟ್ಟಣ ಪಂಚಾಯಿತಿ 11 ವಾರ್ಡ್ ಗಳಲ್ಲಿ 6 ಬಿಜೆಪಿ, 4 ಕಾಂಗ್ರೆಸ್, ಹಾಗೂ ಓರ್ವ ಜೆಡಿಎಸ್ ಸದಸ್ಯರಿದ್ದಾರೆ. ಬಿಜೆಪಿ 6 ಮತಗಳನ್ನು ಹೊಂದಿದ್ದರು, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಅವರ ಮತಗಳು ಸೇರಿಕೊಂಡರು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.


ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?


ಇಂದು ನಡೆದ ಅಧ್ಯಕ್ಷ ಗಾದಿ ಚುನಾವಣೆಯಲ್ಲಿ ಬಿಜೆಪಿಯ ಹಾಗೂ ಜೆಡಿಎಸ್ ಇಬ್ಬರು ಸದಸ್ಯರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು ಹಾಗೂ ಮತ್ತೊಬ್ಬ ಬಿಜೆಪಿ ಸದಸ್ಯ ಇಂದಿನ ಚುನಾವಣೆಯಲ್ಲಿ ಗೈರಾಗಿದ್ದರಿಂದ ಕಾಂಗ್ರೆಸ್ ಸುಲಭವಾಗಿ ಅಧ್ಯಕ್ಷ ಗಾದಿಯನ್ನು ಹಿಡಿಯಿತು.

ಮೂಡಿಗೆರೆ ಬಿಜೆಪಿಯ ಆಂತರಿಕ ಭಿನ್ನಮತ ಸ್ಪೋಟದಿಂದ ಬಿಜೆಪಿಗೆ ಅಧ್ಯಕ್ಷಗಿರಿ ಕೈ ತಪ್ಪಿದೆ. ಇದು ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲೂ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಎದುರಾಗಿದೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್‌ ಆದ ಜನ…


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.