
ಚಿಕ್ಕಮಗಳೂರು/ಬೆಳಗಾವಿ: (ನ್ಯೂಸ್ ಮಲ್ನಾಡ್ ವರದಿ) ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ; ಅಡಕೆ ಬೆಳೆಗಾರರಿಗೆ ಶಾಕಿಂಗ್ ಸುದ್ದಿ! ಕಡಿಮೆಯಾಗುತ್ತಾ ಅಡಿಕೆ ರೇಟ್? ಕಾರಣವೇನು ಗೊತ್ತಾ?

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಶೋಭಾರನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತದೆ. ನನಗೆ ನಂಬಿಕೆಯಿದೆ ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಕರಂದ್ಲಾಜೆ ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಅಡಕೆ ಬೆಳೆಗಾರರಿಗೆ ಶಾಕಿಂಗ್ ಸುದ್ದಿ! ಕಡಿಮೆಯಾಗುತ್ತಾ ಅಡಿಕೆ ರೇಟ್? ಕಾರಣವೇನು ಗೊತ್ತಾ?
ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ:
ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ, ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲಾರಿಗೂ ಅನ್ವಯ ಆಗುತ್ತದೆ. ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಬ್ಸಿಡಿ
ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ:
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷದಿಂದ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾ ಅವರೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಇವೆಲ್ಲ ಊಹಾಪೋಹ ಎನಿಸುತ್ತದೆ. ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ. ಆಗ ಸತ್ಯ ಹೊರಬರುತ್ತದೆ ಎಂದರು.
ಇದನ್ನೂ ಓದಿ; ಕೇಂದ್ರ ಪ್ರೌಢಶಿಕ್ಷಣ ಮಂಡಳಿಯಿಂದ ನೇಮಕ ಅಧಿಸೂಚನೆ; ವಿವಿಧ 118 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ:
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನ ಮುಂದಿಟ್ಟುಕೊಂಡು ಮತ ಕೇಳಲು ಹೊರಟಿದೆ. ಬಿಜೆಪಿ ಯಾವ ಮಾನದಂಡ ಇಟ್ಟುಕೊಂಡು ಲೋಕಸಭೆಯಲ್ಲಿ ಮತ ಕೇಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ. 10 ವರ್ಷಗಳ ಅಭಿವೃದ್ಧಿಯ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆದಂಥ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು ಇದು ನಮ್ಮ ಶಕ್ತಿ. ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಮೋದಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಗೌರವದ ದೂರದೃಷ್ಟಿ ಮೇಲೆ ಮತ ಕೇಳುತ್ತೇವೆ ಎಂದರು.
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ
ಗುಂಡಿ ಮುಚ್ಚಿ ಮೇಲೆದ್ದು ಬರಲು ಸಮಯ ಬೇಕು:
ಈರುಳ್ಳಿ, ಟೊಮೊಟೊ ಸಲುವಾಗಿ ಸರ್ಕಾರ ಬಿದ್ದ ಉದಾಹರಣೆ ಇದೆ. ಸಬ್ಸಿಡಿ ಆಧಾರದ ಮೇಲೆ ರೈತರಿಗೆ ಬೀಜ, ಟೆಕ್ನಾಲಜಿ ನೀಡುತ್ತಿದ್ದೇವೆ. ಯುಪಿಎ ಸಮಯದಲ್ಲಿನ ಲೋಪಗಳ ಗುಂಡಿ ಮುಚ್ಚಿ ಮೇಲೆದ್ದು ಬರಲು ನಮಗೆ ಸಮಯ ಬೇಕು. ಎಲ್ಲಾ ವಿಚಾರಗಳಲ್ಲಿ ಸ್ವಾವಲಂಬನೆ ಸಾಧಿಸಲು ಮೋದಿ ಕಾರ್ಯಪ್ರವೃತರಾಗುತ್ತಿದ್ದಾರೆ. ಈ ಮೊದಲು ನಾವು ಡಿಫೆನ್ಸ್ ನಲ್ಲಿ ನಾವು ಸ್ವಾವಲಂಬಿಗಳಾಗಿ ಇರಲಿಲ್ಲ, ಮದ್ದುಗುಂಡು ಆಚೆಯಿಂದ ಬರುತ್ತಿತ್ತು. ಇವತ್ತು ಭಾರತ ಸ್ವಾವಲಂಬನೆ ಕಡೆಗೆ ದಾಪುಗಾಲು ಇಡುತ್ತಿದೆ, ನಾವು ಬೇರೆ ದೇಶಕ್ಕೆ ರಪ್ತು ಮಾಡಲು ಯೋಚನೆ ಮಾಡಿದ್ದೇವೆ ಎಂದರು.
ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ಮಾಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಬೆಲೆ ಇಳಿಕೆಗೂ ಚುನಾವಣೆಗೂ ಸಂಬಂಧವಿಲ್ಲ. ಗ್ಯಾಸ್, ಪೆಟ್ರೋಲ್ ನಲ್ಲಿ ನಾವಿನ್ನೂ ಸ್ವಾವಲಂಬಿ ಆಗಿಲ್ಲ. ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಅವರು ಯೋಜನೆ ರೂಪಿಸುತ್ತಿದ್ದಾರೆ ಎಂದರು.
ಚಿಕ್ಕಮಗಳೂರು: ಬಜರಂಗದಳ ಮಾಜಿ ಸಂಚಾಲಕ, ಬಿಜೆಪಿ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಜರಂಗದಳ ಮಾಜಿ ಸಂಚಾಲಕ, ಬಿಜೆಪಿ ಕಾರ್ಯಕರ್ತನನ್ನು ಗಡಿಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್; LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ
ಚಿಕ್ಕಮಗಳೂರು ತಾಲ್ಲೂಕು ಆಲ್ಲೂರು ಹೋಬಳಿಯ ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥನನ್ನು 17 ಕಾರಣಗಳನ್ನು ನೀಡಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದ್ದು, ಮಾ.14 ಗುರುವಾರದಂದು ಜಿಲ್ಲಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.
ಇದನ್ನೂ ಓದಿ; RDPR ಇಲಾಖೆಯಿಂದ ಉದ್ಯೋಗ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ; ಓಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೆಲವು ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕ ಶಾಂತಿ, ನೆಮ್ಮದಿ, ಭದ್ರತೆ, ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಅಲ್ಲದೆ ಮಂಜುನಾಥ್ ವಿರುದ್ಧ 17 ಕ್ರಿಮಿನಲ್ ಪ್ರಕರಣ, 7 ಮುಂಜಾಗ್ರತಾ ಪ್ರಕರಣಗಳು ದಾಖಲಾಗಿವೆ. ಯುವ ಜನರನ್ನು ಪುಚೋದಿಸಿ ಅವರಲ್ಲಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹಾಗೂ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಜಿಲ್ಲೆಗೆ ಆಗಮಿಸಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂಬ ಕಾರಣ ನೀಡಿ ಗಡಿಪಾರು ಮಾಡಲಾಗಿದ್ದು, ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55 ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಇದನ್ನೂ ಓದಿ; ಪಿಎಂ ಸೂರ್ಯ ಯೋಜನೆಯ ಉಚಿತ ವಿದ್ಯುತ್: ಕೇಂದ್ರದಿಂದ ಭಾರೀ ಸಬ್ಸಿಡಿ; ಈ ಹಂತ ಅನುಸರಿಸಿ ಅರ್ಜಿ ಸಲ್ಲಿಸಿ













