ಕಾಫಿನಾಡಿನಲ್ಲೂ ಕೊರೊನಾ ಆತಂಕ | ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲೂ ಇಬ್ಬರಿಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ.

 

ಇದನ್ನೂ ಓದಿ; ಗ್ರಾಮ ಆಡಳಿತಾಧಿಕಾರಿ ಆಯ್ಕೆಯಲ್ಲಿ ಮಹತ್ವದ ಬದಲಾವಣೆ;ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ; ಸದ್ಯದಲ್ಲೇ 750 ಹುದ್ದೆಗಳಿಗೆ ಅಧಿಸೂಚನೆ

ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಮತ್ತೊಮ್ಮೆ ಇಬ್ಬರ ಕೋವಿಡ್ ಟೆಸ್ಟ್ ಗಾಗಿ ಅಧಿಕಾರಿಗಳು ಸ್ಯಾಂಪಲ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಮಾರುತಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಈಗ ಆಲ್ಟೊ ಕೆ10 ಮೇಲೆ ದೊಡ್ಡ ರಿಯಾಯಿತಿ; ಹಾಗಾದರೆ ಇದರ ಬೆಲೆ ಎಷ್ಟು?ಸುರಕ್ಷತಾ ವೈಶಿಷ್ಟ್ಯಗಳು ಯಾವುವು?

ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಕ್ಕೆ ಎಚ್ಚೆತ್ತ ಸರ್ಕಾರ

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಕ್ಕೆ ಎಚ್ಚೆತ್ತಿರುವ ಸರ್ಕಾರ ಜಿಲ್ಲಾ ಆರೋಗ್ಯ ಇಲಾಖೆ ಎಲ್ಲಾ ಸಿದ್ದತೆ ನಡೆಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಿ.ಎಚ್ ಒ ಡಾ. ಅಶ್ವಥ್ ಬಾಬು ತಿಳಿಸಿದರು.

ಇದನ್ನೂ ಓದಿ; ಗ್ರಾಹಕರೇ ಗಮನಿಸಿ; ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ;ಇಲ್ಲಾಂದ್ರೆ ಹೊಸ ವರ್ಷದಿಂದ ಸಬ್ಸಿಡಿ ಆಸೆ ಬಿಡಿ!

 

ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಹರಡದಂತೆ ನಿಗಾ ವಹಿಸುವುದು, ಅಲ್ಲದೇ ಖಾಸಗಿ ಆಸ್ಪತ್ರೆಗಳಿಗೂ ಸಹಾ ಇಲಾಖೆಯ ಸೂಚನೆಗಳನ್ನು ಅನುಸರಿಸಲು ಸೂಚನೆ ಹಾಗೂ ಮಾರ್ಗಸೂಚಿ ಪಟ್ಟಿ ನೀಡಲಾಗುವುದು ಎಂದರು. 60 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯ ಮಾಸ್ಕ್ ಧರಿಸಲು ಆದೇಶ ಬಂದಿದ್ದು, ಐಎಲ್ ಐ, ಸಾರಿ ಕೇಸ್ ಗಳ ತಪಾಸಣೆ ಜೊತೆಗೆ ಜ್ವರ ಹಾಗೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳ ಕುರಿತು ಆಸ್ಪತ್ರೆಗಳಲ್ಲಿ ನಡೆಸಿರುವ ಸಿದ್ದತೆ ಬಗ್ಗೆ ತಿಳಿಸಿದರು.

ಇದನ್ನೂ ಓದಿ; ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ

ಇನ್ನು ಜಿಲ್ಲೆಗೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ನಿರ್ಬಂಧಿಸುವ ಯಾವುದೇ ಆದೇಶ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿಲ್ಲ ಎಂದರು.

 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.