ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ಸ್ಥಾಪಿಸಲು ಸ್ಥಳವಕಾಶಕ್ಕಾಗಿ ಅನುಮತಿ ಕೋರಿ ಆರು ತಿಂಗಳು ಕಳೆದರು ಸಂಬಂಧಿಸಿದ ಅಧಿಕಾರಿ ನಿರ್ಲಕ್ಷ್ಯ ವಹಿಸಿದ್ದಾರೆಂದು ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡರಾದ ಕೆ.ಎಲ್.ಅಶೋಕ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಹಿರಿಯ ಮೇಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳವಕಾಶವನ್ನು ಗುರುತಿಸಿಕೊಟ್ಟು, ಡಾ ಬಿ ಆರ್ ಅಂಬೇಡ್ಕರ್ ರವರ ಗೌರವಾರ್ಥವಾಗಿ ಪ್ರತಿಮೆಯನ್ನು ಸ್ಥಾಪಿಸಲು ಸ್ಥಳವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿ ಆರು ತಿಂಗಳು ಕಳೆದಿದೆ. ಆದರೆ, ಇಲ್ಲಿಯವರೆಗೂ ಜಾಗವನ್ನು ಗುರುತಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಭ್ರಷ್ಟಾಚಾರ ಹಾದಿಯಲ್ಲಿ ಕಾಂಗ್ರೆಸ್ ಕೂಡ ನಡೆಯುತ್ತಿದೆ:
ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ ಕಂಡು ಬರುತ್ತಿದ್ದು, ಅಭಿವೃದ್ಧಿ ಮರೀಚಿಕೆಯಾಗಿದೆ. ಬಿಜೆಪಿಯ ಭ್ರಷ್ಟಾಚಾರ ನೋಡಿ ಜನ ಕಾಂಗ್ರೆಸ್ಗೆ ಅಧಿಕಾರ ನೀಡಿದ್ದಾರೆ. ಈಗ ಕಾಂಗ್ರೆಸ್ ಕೂಡ ಅದೇ ಹಾದಿಯಲ್ಲಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕ್ಷೇತ್ರದಲ್ಲಿ ಶಾಸಕರು ಹಾಗೂ ಅವರ ಹಿಂಬಾಲಕರು ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.
ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವ ಕುರಿತು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಲ್ಲದೆ ಹಾಗಲಗಂಚಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಆಶ್ವಾಸನೆ ನೀಡಿ ಆರು ತಿಂಗಳು ಕಳೆದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಶಾಸಕ ಟಿ.ಡಿ.ರಾಜೇಗೌಡರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಕೆ. ಎಲ್. ಆಶೋಕ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?












