ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಗುಡ್ಡೇತೋಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೊಗ್ರೆಯಲ್ಲಿ ನಡೆಯುತ್ತಿರುವ 10ನೇ ಕೊಪ್ಪ ತಾಲ್ಲೂಕು ಸಮ್ಮೇಳನದ ಅಂಗವಾಗಿ ಜನವರಿ 17ರಂದು ಶನಿವಾರ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಸ್ಪರ್ಧೆಯಲ್ಲಿ ದೇಶಭಕ್ತರು, ಕನ್ನಡದ ಕವಿಗಳು, ಸಾಹಿತಿಗಳು ಹಾಗೂ ಮಹನೀಯರ ವೇಷಭೂಷಣ ಧರಿಸಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಕನ್ನಡ ಸಂಸ್ಕೃತಿ ಮತ್ತು ಭಾಷೆಯ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಶಾಲಾ ವಲಯದಲ್ಲಿ ಪ್ರಥಮ ಬಹುಮಾನ ರೂ.5,000, ದ್ವಿತೀಯ ರೂ.3,000 ಹಾಗೂ ತೃತೀಯ ರೂ.2,000 ನಗದು ಬಹುಮಾನ ನೀಡಲಾಗುತ್ತದೆ. ಸಾರ್ವಜನಿಕ ವಲಯದಲ್ಲಿಯೂ ಇದೇ ಮೊತ್ತದ ಬಹುಮಾನಗಳನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಸ್ತ್ರೀ ಶಕ್ತಿ ಸಂಘದ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡದ ಮೆರವಣಿಗೆಯನ್ನು ಇನ್ನಷ್ಟು ಆಕರ್ಷಕಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತರು ಜನವರಿ 10ರೊಳಗೆ ಈ 9483325298, 7619489989 (ಕೀರ್ತಿರಾಜ್) ನಂಬರಿಗೆ ಕರೆಮಾಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.












