ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ನಾಲೂರು ಅಶೋಕ್ ರವರ ಹಸು, ಮೇವು ಅರಸಿ ಹೋಗಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಟ್ ಆಗಿ ಬಿದ್ದಿದ್ದನ್ನು ಸ್ಪರ್ಶಿಸಿ ಸಾವನ್ನಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ, ಜಾನುವಾರು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಹಿಂದೆಯೂ ಈ ರೀತಿ ಘಟನೆ ಸಂಭವಿಸಿದ್ದು, ವಿದ್ಯುತ್ ಅವಘಡ ತಪ್ಪಿಸುವಲ್ಲಿ ಮೆಸ್ಕಾಂ ಸಿಬ್ಬಂದಿ ವಿಫಲರಾಗಿದ್ದಾರೆ ಹಾಗೂ ಘಟನೆಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













