ಬಣಕಲ್ : ಒತ್ತುವರಿ ಭೂಮಿ ಬಿಡಿಸಿ ನಿರಾಶ್ರಿತರಿಗೆ ನೀಡಲು ಕಮ್ಯುನಿಸ್ಟ್ ಪಕ್ಷ ಒತ್ತಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಾಳೂರು ಹೋಬಳಿಯ ಗಬ್ಗಲ್ ಟಾಟಾ ಎಸ್ಟೇಟ್ ನಿಂದ ನೂರಾರು ನಿವೇಶನ ರಹಿತರು ಸೋಮವಾರ ಮೆರವಣಿಗೆ ತೆರಳಿ ಕೂವೆ ಗ್ರಾಮ ಪಂಚಾಯಿತಿಯ ಮುಂದೆ ಧರಣಿ ನಡೆಸಿದರು.

 

ಇದನ್ನೂ ಓದಿ; ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ

ಕೂವೆ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ 15 ವರ್ಷ ಕಳೆದರೂ ನಿವೇಶನ ನೀಡದೆ ಇರುವುದರಿಂದ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದೀಗ ಸರ್ಕಾರಿ ಭೂಮಿ ಅಕ್ರಮ ಭೂ ಮಂಜೂರಾತಿ ಮಾಡಿರುವ ಭೂಮಿ ಮತ್ತು ಅಧಿಕಾರಿಗಳ ಬೇನಾಮಿ ಆಸ್ತಿ ಈ ಗ್ರಾಮ ಪಂಚಾಯಿತಿಯಲ್ಲಿ ನೂರಾರು ಎಕರೆ ಲಭ್ಯವಿದ್ದು ಇದನ್ನು ಬಿಡಿಸಿ ನಿವೇಶನ ರಹಿತರಿಗೆ ಊರಿನ ಅಭಿವೃದ್ಧಿಗಾಗಿ, ಸ್ಮಶಾನ, ಆಟದ ಮೈದಾನ, ಅಂಬೇಡ್ಕರ್ ಭವನ ಇತರೆ ಊರಿನ ಅಭಿವೃದ್ಧಿಗಾಗಿ ಮೀಸಲಿಡ ಬೇಕೆಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ನೇತೃತ್ವದಲ್ಲಿ ನಿವೇಶನ ರಹಿತರ ಹೋರಾಟ ಸಮಿತಿ ಧರಣಿ ನಡೆಯಿತು.

 

ಇದನ್ನೂ ಓದಿ; RSS ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಭಾರತ ಕಮ್ಯೂನಿಸ್ಟ್ ಪಕ್ಷದ ತಾಲ್ಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು ಮಾತನಾಡಿ, ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂವೆ ಗ್ರಾಮದ ಸ.ನಂ.256, 164, 275, 271, 68 ಕಲ್ಮನೆ ಗ್ರಾಮದ ಸರ್ವೆ ನಂ.51,46,49 ತಲಗೂರು ಸ.ನಂ. 49 ಹಾದಿಓಣಿ ಸ.ನಂ. 56, 22, 21 ಇಲ್ಲಿ ಸರ್ಕಾರಿ ಜಮೀನಿದ್ದರೂ ನಿವೇಶನ ರಹಿತರಿಗೆ ನಿವೇಶನ ಕೊಡಲು ಪಂಚಾಯಿತಿಗೆ ಸಾಧ್ಯವಾಗಿಲ್ಲ. ಆದರೆ ಈ ಎಲ್ಲಾ ಸರ್ವೆ ನಂಬರ್ ನಲ್ಲಿ ಅಕ್ರಮ ಭೂ ಮಂಜೂರಾತಿ ಮಾಡಲಾಗಿದೆ.

 

ಇದೇ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಮಂಜೂರಾತಿಯಲ್ಲಿ ಭಾಗಿಯಾಗಿರುವ ಅಧಿಕಾರಿಯ ಬೇನಾಮಿ ಆಸ್ತಿ ಇದ್ದು ಅದನ್ನು ಸ್ಥಳೀಯ ತೆರವು ಪಡಿಸಿ ನಿವೇಶನ ರಹಿತರು ಹಾಗೂ ಊರಿನ ಅಭಿವೃದ್ಧಿಗಾಗಿ ಮೀಸಲಿಡಬೇಕು ಅದಕ್ಕಾಗಿ ನಮ್ಮ ಬೇಡಿಕೆ ಈಡೇರಿಕೆಗಾಗಿ ಸ್ಥಳೀಯ ಪಂಚಾಯಿತಿ ಎದುರು ಪಂಚಾಯಿತಿಯಲ್ಲಿ ನಿರ್ಣಯ ಕೈಗೊಳ್ಳಲು ಧರಣಿ ಆರಂಭಿಸಿದ್ದೇವೆ. ಗ್ರಾಮ ಪಂಚಾಯಿತಿ ನಮ್ಮ ಬೇಡಿಕೆಗೆ ಸ್ಪಂದಿಸುವ ಮೂಲಕ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಮುಂದಾಗಬೇಕು ಎಂದರು

ಪ್ರತಿಭಟನೆಯಲ್ಲಿ ಸುಂದರ್ ಬಾಳೂರು, ಮಂಜು, ರವಿ, ಲೋಕೇಶ್, ಮಲ್ಲೇಶ್, ಸಿಗಮಣಿ, ರೇಣುಕಾ, ಲಕ್ಷ್ಮೀ, ಅನಿಲ್, ಬಂಗಾರಪ್ಪ, ಅಕ್ಷತ್, ಚಂದ್ರು, ಅನಿಲ್ ಕುಮಾರ್, ನಾರಾಯಣ, ಮಂಜುಳಾ, ಪ್ರೇಮ ಸೀನಾ, ಪುಷ್ಪ, ಇತರರು ಇದ್ದರು.

 

ಆಹಾರ ತಜ್ಞ ಕೆ.ಸಿ.ರಘು ಇನ್ನಿಲ್ಲ

ಬೆಂಗಳೂರು/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಾಧ್ಯಮ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಆಹಾರ ಕ್ರಮದ ಕುರಿತು ಟಿಪ್ಸ್ ನೀಡುತ್ತಿದ್ದ ಹೆಸರಾಂತರ ಆಹಾರ ತಜ್ಞ ಕೆ.ಸಿ.ರಘು ಅನಾರೋಗ್ಯದಿಂದ ಇಂದು ನಿಧನ ಹೊಂದಿದ್ದಾರೆ.

ಈ ಕುರಿತು ರಘು ಅವರ ಪತ್ನಿ ಆಶಾ ರಘು ಮಾಹಿತಿ ನೀಡಿದ್ದಾರೆ. ಕೆ.ಸಿ.ರಘು ಬೆಳಗಿನ ಜಾವ ಸುಮಾರು 7.30 ಕ್ಕೆ ಅಗಲಿದ್ದಾರೆ. ರಘು ಅವರು ಲಂಗ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ದಾಸರಹಳ್ಳಿಯ ಅಮೃತನಗರದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಆಯಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡು ಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡು ಹಿಡಿದಿದ್ದರು. ಬಳಿಕ ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿದೆ ಎನ್ನಲಾಗಿದೆ.

ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿತ್ತು. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ‘ಆಹಾರ ರಾಜಕೀಯ’ಮತ್ತು ‘ತುತ್ತು ತತ್ವ’ ಪುಸ್ತಕಗಳನ್ನು ಪ್ರಕಟಿಸಿದ್ದರು.

ಇನ್ನು ರಘು ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಕಲ್ಮನೆ ಗ್ರಾಮದವರು. ಕಲ್ಮನೆ ದಿವಂಗತ ಕಳಸೇಗೌಡರ ಮೊಮ್ಮಗ. ಕಲ್ಮನೆ ದಿವಂಗತ ಚಂದ್ರೇಗೌಡರ ಪುತ್ರ. ಇವರು ತಮ್ಮ ಉನ್ನತ ವಿದ್ಯಾಭ್ಯಾಸದ ನಂತರ ಭವಿಷ್ಯ ಅರಸಿ ಬೆಂಗಳೂರು ಸೇರಿದ್ದರು.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.