ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕ್ರೇನ್ ವೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ಪಟ್ಟಣದ ಸಂತೆ ಮೈದಾನದ ಬಳಿ ಬುಧವಾರ ನಡೆದಿದೆ.
ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?

ಸುಪ್ರಿತಾ (26) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆ ದಾಖಲಿಸಲಾಗಿದೆ. ಜಲಜೀವನ್ ಮಿಷನ್ ಕಾಮಗಾರಿಗೆ ಬಂದಿದ್ದ ಕ್ರೇನ್ ಎಂದು ತಿಳಿದು ಬಂದಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಉಚಿತ ಎಲ್ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?












