ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಬೆಳೆ ನಾಶ: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಯಿಂದ ಬಾಳೆ, ತೆಂಗು, ಕಾಫಿ ಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ.


ಇದನ್ನೂ ಓದಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ; ಏನದು?


ಐದಳ್ಳಿ ಗ್ರಾಮದ I.B ಮಂಜುನಾಥ್ ಅವರ ತೋಟದಲ್ಲಿ ಬಾಳೆ, ತೆಂಗು, ಕಾಫಿ ಗಿಡಗಳನ್ನು ನಾಶ ಮಾಡಿದೆ. ಜೊತೆಗೆ ಅರೆನೂರು, ಹಕ್ಕಿಮಕ್ಕಿ, ಐದಳ್ಳಿ, ಬೆಟ್ಟದಳ್ಳಿ, ನರುಡಿ ಗ್ರಾಮಗಳಲ್ಲಿ ನಿರಂತರವಾಗಿ ಆನೆ ಉಪಟಳ ನೀಡುತ್ತಿದೆ. ಇದರಿಂದ ಬೆಳೆಗಳಿಗೂ ಹಾನಿ ಉಂಟು ಮಾಡುತ್ತಿವೆ.

ಜನಸಾಮಾನ್ಯರು, ಶಾಲೆಗೆ ಹೋಗುವ ಮಕ್ಕಳಿಗೂ ತಿರುಗಾಡುವುದು ಕಷ್ಟಕರವಾಗಿದ್ದು, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು, ಸಚಿವರು ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಲ್ಪಿಸುವ ಕ್ರಮ ಕೈಗೊಳ್ಳಬೇಕು ಎಂದು ಸನ್ಮಿತ್ ಐದಳ್ಳಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.