ಚಿಕ್ಕಮಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಕಿಡಿಕಾರಿದರು.

 

ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ

ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಾರು ಹಿಂದೂಗಳು ಇದ್ದರು. ಗಾಂಧಾರಿಯ ತವರು ಮನೆ ಅಫ್ಘಾನಿಸ್ತಾನ ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಮೊಘಲ್ ಸ್ಥಾನ ಅಥವಾ ಪಾಕಿಸ್ತಾನ ಆಗುತ್ತದೆ. ಹಿಂದೂಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್ ನೀತಿ, ಪಾಕಿಸ್ತಾನದ ನಿರ್ಮಾಣಕ್ಕೆ ಕಾರಣವಾಗಿತ್ತದೆ. ಹಿಂದೂಗಳನ್ನು ಒಡೆದಾಳುವ ನೀತಿ ಅಫ್ಘಾನಿಸ್ತಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದರು.

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಯಾವ ಜಿಲ್ಲಾ ನ್ಯಾಯಾಲಯ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ತಾನ ಎನ್ನುವ ವಿಚಾರವೇ ತಲೆ ಎತ್ತುತ್ತಿರಲಿಲ್ಲ. ಕಾಂಗ್ರೆಸ್ ನದ್ದು ಎಸ್ ಡಿಪಿಐ, ಪಿಎಫ್ ಐ ಬೆಂಬಲಿಸುವ ನೀತಿ, ನೀವು ಮತ್ತು ನಿಮ್ಮ ಮಕ್ಕಳು ಸುರಕ್ಷಿತವಾಗಿರಬೇಕಾದರೆ ಕಾಂಗ್ರೆಸ್ ಕೆಟ್ಟ ನೀತಿ ಮಾಡಬಾರದು, ಹಿಂದೂ ಬಹುಸಂಖ್ಯಾತನಾಗಿದ್ದರೇ ಭಾರತ ಸಂವಿಧಾನ ಉಳಿಯುತ್ತದೆ. ಹಿಂದೂ ಅಲ್ಪ ಸಂಖ್ಯಾತನಾದರೇ ಭಾರತ, ಸಂವಿಧಾನ ಉಳಿಯುವುದಿಲ್ಲ ಎಂದರು.

 

ಇದನ್ನೂ ಓದಿ; ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ;  LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ಹಿಂದೂ ರಾಷ್ಟ್ರವಾದರೇ ಅಫ್ಘಾನಿಸ್ತಾನ ಆಗಲು ಜಾಗವೇ ಇರಲಿಲ್ಲ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ ಎಂದು ಕಿಡಿಕಾರಿದರು.

 

ಕರಸೇವಕರ ಬಂಧನ ವಿರೋಧಿಸಿ ತನ್ನನ್ನೂ ಬಂಧಿಸುವಂತೆ ಪೊಲೀಸ್ ಠಾಣೆ ಎದುರು ಕುಳಿತ ಸಿ.ಟಿ ರವಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕರಸೇವಕ ಶ್ರೀಕಾಂತ ಪೂಜಾರಿ ಬಂಧನ ವಿರೋಧಿಸಿ ನಿನ್ನೆ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಇಂದು ಸಿ.ಟಿ ರವಿ ಪೊಲೀಸ್ ಠಾಣೆ ಎದುರು ಪ್ಲೇ ಕಾರ್ಡ್ ಹಿಡಿದು ತನ್ನನ್ನೂ ಬಂಧಿಸುವಂತೆ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ 1992 ರಲ್ಲಿ ನಡೆದ ರಾಮಜನ್ಮಭೂಮಿ ಹೋರಾಟ ವೇಳೆ ದಾಖಲಾಗಿದ್ದ ಹಳೇ ಪ್ರಕರಣದಲ್ಲಿ ಕಳೆದ ವಾರ ಬಂಧಿಸಲ್ಪಟ್ಟ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ಹುಬ್ಬಳ್ಳಿಯಲ್ಲಿ ಅಯೋಧ್ಯೆ ಕರಸೇವಕ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸುದೀರ್ಘ ಕಾಲದ ತನ್ನ ದ್ವೇಷ ಭಾವನೆಯನ್ನು ಹೊರಗೆ ಹಾಕಿದೆ ಎಂದು ಪ್ರತಿಭಟನೆ ನಡೆಸಿದ್ದರು.

ಇದೀಗ ಶ್ರೀ ರಾಮ್ ಜಯ ರಾಮ್ ಜಯ ಜಯ ರಾಮ್ ಎನ್ನುತ್ತಾ ಕುಳಿತಿರುವ ಮಾಜಿ ಸಚಿವ ಸಿ.ಟಿ ರವಿ, ನಾನು 1992 ರ ಡಿಸೆಂಬರ್ 06 ರ ಅಯೋಧ್ಯೆಯ ಶ್ರೀ ರಾಮ ಮಂದಿರರ ಕರ ಸೇವಕ, ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಪೊಲೀಸ್ ಠಾಣೆ ಎದುರು ವಿಭಿನ್ನ ಪ್ರತಿಭಟನೆಗೆ ಕುಳಿತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.