ಕಳಸ: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಆತ್ಮಹತ್ಯೆಗೆ ಶರಣು

ಕಳಸ: (ನ್ಯೂಸ್ ಮಲ್ನಾಡ್ ವರದಿ) ಪೊಲೀಸರು ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ್ದಾರೆ ಎಂದು ದೂರ ನೀಡಿದ್ದ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಸ್ತಿ ಗದ್ದೆ ಗ್ರಾಮದ ನಾಗೇಶ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ


ಕಳಸ‌ ಸಮೀಪದ ಸಂಸೆ ಎಸ್ಟೇಟ್​ನಲ್ಲಿ ಜೀಪ್​ ಚಾಲಕನಾಗಿ ಕೆಲ ಮಾಡುತ್ತಿದ್ದ ನಾಗೇಶ್. ಜುಲೈ 17 ರ ರಾತ್ರಿ ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ನಡುರಸ್ತೆಯಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಜೀಪಿನಲ್ಲಿ ಬಂದ ನಾಗೇಶ್​, ಪಕ್ಕಕ್ಕೆ ಸರಿಯುವಂತೆ ಹೇಳಿದ್ದಾರೆ. ಇಷ್ಟಕ್ಕೆನೇ, ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ಯುವಕ ನಾಗೇಶ್​ನ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೇ, ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನಿಸಿದನೆಂದು ಎಂದು ಸುಳ್ಳು ಎಫ್​ಐಆರ್ ದಾಖಲಿಸಿದ್ದರು.

ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ನ ದೌರ್ಜನ್ಯದ ಬಗ್ಗೆ ಯುವಕ ನಾಗೇಶ್ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ​ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮ್ಟೆ ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಅತ್ತ ತನಿಖೆ ನಡೆಯುತ್ತಿದ್ದು, ಇತ್ತ ನಾಗೇಶ್​ ಬುಧವಾರ (ಆ.13) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ


ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ನಾಗೇಶ್ ಆತ್ಮಹತ್ಯೆಗೆ ಮೊದಲು ಬರೆದಿರುವ ಪತ್ರದಲ್ಲಿ ಕುದುರೆಮುಖ PSI ಆದರ್ಶ್, ಪೇದೆ ಸಿದ್ದೇಶ್ ಹೆಸರು ಸೇರಿದಂತೆ ಸ್ಥಳೀಯರಾದ ಶಶಿ, ಸುರಕ್ಷಿತ್ ಹೆಸರು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.