ಹಾಸನ: (ನ್ಯೂಸ್ ಮಲ್ನಾಡ್ ವರದಿ) ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದ್ದು, ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?

ಹೌದು, ಅಕ್ಟೋಬರ್ 9 ರಂದು ಹಾಸನಾಂಬ ದೇವಾಲಯದ ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುತ್ತದೆ. ಹಾಸನ ನಗರದಲ್ಲಿ ಸ್ವಾಗತ ಕಮಾನು, ಲೈಟಿಂಗ್ಸ್, ಎಲ್ಇಡಿ ಅಳವಡಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಅನುಕೂಲ ಕಲ್ಪಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ
ಕಳೆದ ಬಾರಿ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ಬಾರಿ ಇನ್ನೂ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ನೂಕುನುಗ್ಗಲು ಆಗದಂತೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಗತ್ಯ ಕ್ರಮಕ್ಕೆ ಮುಂದಾಗಿದೆ. ವಿಶೇಷ ದರ್ಶನಕ್ಕೆ ಬರುವಂತಹ ಭಕ್ತರಿಗೆ 300 ರೂ. ಹಾಗೂ 1000 ರೂ. ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದು ಮಾಡಿದ್ದು, ಗೋಲ್ಡ್ ಪಾಸ್ ಜಾರಿಗೆ ತರಲಾಗಿದೆ. ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿದ್ದು, ದಿನದಲ್ಲಿ ಎರಡು ಗಂಟೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.













