ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ವಿವಾದಿತ ಕೇಂದ್ರ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಗೋರಿಗಳ ನಡುವಿನ ಔದುಂಬರ ವೃಕ್ಷ ಪೂಜೆಗೆ ಅವಕಾಶ ನೀಡುವಂತೆ ಬಜರಂಗದಳ ಹಾಗೂ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದು, ಸದ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಹೊಸ ತಲೆನೋವು ಶುರುವಾಗಿದೆ.
ದತ್ತ ಪೀಠದಲ್ಲಿರುವ ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸದಂತೆ ಮರದ ಸುತ್ತಲೂ ಜಿಲ್ಲಾಡಳಿತ ಬೇಲಿ ಹಾಕಿದೆ ಅಂತ ಹಿಂದೂ ಪರ ಸಂಘಟನೆಗಳು ಆರೋಪ ಮಾಡುತ್ತಿವೆ. ಇಲ್ಲಿ ಪೂಜೆ ಸಲ್ಲಿಸಲು ನ್ಯಾಯಾಲಯ ಅಥವಾ ಧಾರ್ಮಿಕ ದತ್ತಿ ಇಲಾಖೆ ನಿಷೇಧ ಹೇರಿಲ್ಲ ಆದರೂ ನಮಗೆ ಜಿಲ್ಲಾಡಳಿತ ಪೂಜೆಗೆ ಅವಕಾಶ ನೀಡಿಲ್ಲ ಅಂತ ಹಿಂದೂ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಇದೇ ಸ್ಥಳದಲ್ಲಿ ಮುಸಲ್ಮಾನರಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಆದರೆ ನಮಗೆ ಪೂಜೆ ಸಲ್ಲಿಸಲು ಯಾಕೆ ಅವಕಾಶ ಇಲ್ಲ? ಇದು ಯಾವ ನ್ಯಾಯ? ಜೊತೆಗೆ ದತ್ತ ಪೀಠದಲ್ಲಿ ಮುಜರಾಯಿ ಇಲಾಖೆ ಹೊರತುಪಡಿಸಿ ಬೇರೆ ಯಾರು ಕಾಣಿಕೆ ಡಬ್ಬ ಇಡುವಂತಿಲ್ಲ ಆದರೂ ಅಲ್ಲಿ ಹಸಿರು ಬಟ್ಟೆ ಹಾಸಿ ಕಾಣಿಕೆ ಡಬ್ಬ ಇಟ್ಟು ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ದತ್ತಪೀಠದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. – ರಂಗನಾಥ್, ಬಜರಂಗದಳ ಮುಖಂಡ
ಅನಧಿಕೃತ ಅಂಗಡಿ, ಪ್ರವಾಸಿಗರಿಂದ ವಸೂಲಿ

ದತ್ತಪೀಠದ ವ್ಯಾಪ್ತಿಯಲ್ಲಿರುವ ಮಾಣಿಕ್ಯಧಾರಾ ಬಳಿ ಅನಧಿಕೃತ ಅಂಗಡಿಗಳು ಹೆಚ್ಚಾಗಿವೆ. ಅಲ್ಲಿ ಮಾಂಸಹಾರವನ್ನು ತಯಾರಿಸುತ್ತಿರುವುದರಿಂದ ಮಾಣಿಕ್ಯಧಾರಾದಲ್ಲಿ ಸ್ನಾನ ಮಾಡುವವರ ಧಾರ್ಮಿಕ ನಂಬಿಕೆಗೆ ಧಕ್ಕೆ ತರಲಾಗುತ್ತಿದೆ. ಜೊತೆಗೆ ದತ್ತಪೀಠಕ್ಕೆ ಆಗಮಿಸುವ ಪ್ರವಾಸಿಗರನ್ನು ಅಲ್ಲಿನ ಜೀಪ್ ಚಾಲಕರು ಹೆಚ್ಚಿನ ಜನರನ್ನು ಕೂರಿಸಿಕೊಂಡು ಓವರ್ ಲೋಡ್ ಮಾಡಿ ಪ್ರವಾಸಿಗರಿಂದ ಹೆಚ್ಚಿನ ವಸೂಲಿ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಜಿಲ್ಲಾಡಳಿತ ಕಡಿವಾಣ ಹಾಕಬೇಕೆಂದು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಒತ್ತಾಯಿಸಿದ್ದಾರೆ.
ADVERTISEMENT: ಟ್ರಿಲಿಯಂಟ್ ಡಿಜಿಟಲ್ ವಾಕ್-ಇನ್ ಸಂದರ್ಶನ (JOB OFFER)
📅 ದಿನಾಂಕ: 17 ಮೇ 2025
🕒 ಸಮಯ: ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1:00 ರವರೆಗೆ
📍 ಸ್ಥಳ: ಟ್ರಿಲಿಯಂಟ್ ಡಿಜಿಟಲ್ ಪ್ರೈವೆಟ್ ಲಿಮಿಟೆಡ್, ನಂ. 4, ಶಾರದಾ ನಗರ, ಮಾಮ್‌ಕೋಸ್ ಕಟ್ಟಡದ ಬಳಿ, ಶೃಂಗೇರಿ
ಯಾರು ಭಾಗವಹಿಸಬಹುದು?
🎓 BCA / BE / / BSc / MBA ಪದವಿಧರರು
💡 ತಂತ್ರಜ್ಞಾನ, ಕ್ರಿಯೇಟಿವಿಟಿ ಮತ್ತು ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಆಸಕ್ತಿ ಇರುವವರು
ಇದು ನಿಮ್ಮ ಮೊದಲ ಹೆಜ್ಜೆ ಆಗಬಹುದು ಡಿಜಿಟಲ್ ಜಗತ್ತಿನಲ್ಲಿ ಯಶಸ್ವಿಯಾದ ವೃತ್ತಿಗೆ!
ನಿಮ್ಮ ಸ್ವವಿರಗಳನ್ನು ಈ ವಾಟ್ಸಾಪ್ ನಂಬರ್ 8277093259 ಅಥವಾ hr@trilliantdigital.com ಗೆ ಕಳಿಸಬಹುದು















